ಭಾರತದ ಪ್ರಾಚೀನ ಬದುಕು ದಾಖಲಿಸಿದ ಮಹರ್ಷಿ

07M.D.R.1
ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಅಭಿನಂದಿಸಲಾಯಿತು. ಕೋಕಿಲಾ ಅರುಣ್, ಟಿ.ಆರ್.ಪ್ರಸನ್ನಕುಮಾರ್, ವನಿತಾ, ಸರ್ವಮಂಗಳಾ, ಸುರೇಶ್, ಪರುಶುರಾಮ್ ಸತ್ತಿಗೇರಿ, ರಾಮಲಿಂಗಯ್ಯ, ನಾಗರಾಜು ಇದ್ದರು.
Published on

ಮದ್ದೂರು: ರಾಮಾಯಣದಂತಹ ಮಹಾಕಾವ್ಯ ರಚಿಸುವ ಮೂಲಕ ಭಾರತದ ಪ್ರಾಚೀನ ಬದುಕು, ಸಂಸ್ಕೃತಿ, ಸಂಬಂಧಗಳು, ಮೌಲ್ಯಗಳನ್ನು ಶ್ರೀ ಮಹರ್ಷಿ ವಾಲ್ಮೀಕಿ ದಾಖಲಿಸಿದ್ದಾರೆ ಎಂದು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಪ್ರಶಂಶೆ ವ್ಯಕ್ತಪಡಿಸಿದರು.

ನಗರದ ನಗರಸಭಾ ಆವರಣದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾಕಾವ್ಯದ ಪಾತ್ರಗಳ ಮೂಲಕ ಜವಾಬ್ದಾರಿ ಮತ್ತು ಕರ್ತವ್ಯದ ಮಹತ್ವ ಸಾರಿ ಮುಂದಿನ ಪೀಳಿಗೆಗೆ ಮೌಲ್ಯಯುತ, ನ್ಯಾಯ, ನಿಷ್ಠೆ, ಪ್ರಾಮಾಣಿಕ ಬದುಕಿನ ಮಾರ್ಗವನ್ನು ತೋರಿದ್ದಾರೆ. ಅವರು ತೋರಿದ ಬೆಳಕಿನ ದಾರಿಯಲ್ಲಿ ನಾವೆಲ್ಲ ಸಾಗಬೇಕಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಮಾತನಾಡಿ, ಮಹಾಕಾವ್ಯ ರಾಮಾಯಣದಲ್ಲಿ ಬರುವ ಒಳ್ಳೆಯ ಪಾತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಾಲ್ಮೀಕಿ ಅವರು ಅತ್ಯುತ್ತಮ ಮಹಾಕಾವ್ಯ ರಚಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸಹಾಯಕ ಪ್ರಾಧ್ಯಾಪಕ ಡಾ.ಸಂದೀಪ್ ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದ ಆವರಣದಿಂದ ವಿವಿಧ ಜನಪದ ಕಲಾಪ್ರಕಾರಗಳೊಂದಿಗೆ ವಾಲ್ಮೀಕಿ ಅವರ ಭಾವಚಿತ್ರವನ್ನು ತೆರೆದ ವಾಹನದಲ್ಲಿಟ್ಟು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ನಗರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸದ್ಯರಾದ ಸರ್ವಮಂಗಳ, ಸುರೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು, ತಾಪಂ ಇಒ ರಾಮಲಿಂಗಯ್ಯ, ಬಿಇಒ ಧನಂಜಯ, ಪೊಲೀಸ್ ಇನ್‌ಸ್ಪೆಕ್ಟರ್ ವೆಂಕಟೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net