ಮುಸುಕಿದ ಮೋಡ ಚದುರಲಿದೆ...

7 Dwd 9
Published on

ಧಾರವಾಡ: ಒಂದು ಕಹಿ ವಾತಾವರಣದಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಲಾಗಿದೆ. ಭಗವಂತನೇ ಅವರನ್ನು ಸಿಹಿ ವಾತಾವಾರಣಕ್ಕೆ ತರುತ್ತಾನೆ. ಮುಸುಕಿದ ಮೋಡ ಭಗವಂತನ ಕೃಪೆಯಿಂದ ಚದುರಲಿದೆ ಎಂದು ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿ ಹೇಳಿದರು.

ನಗರದ ಮುರುಘಾಮಠದ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜನ್ಮದಿನದ ಅಂಗವಾಗಿ ಮಠದಲ್ಲಿ ಸರ್ವ ಸಮಾಜಗಳ ಸ್ವಾಭಿಮಾನಿ ವೇದಿಕೆಯಿಂದ ಶನಿವಾರ ಆಯೋಜಿಸಿದ್ದ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಜಿಲ್ಲಾಧ್ಯಕ್ಷ ಅನೀಲಕುಮಾರ ಪಾಟೀಲ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಸಹೋದರನ ಅನುಪಸ್ಥಿತಿಯಲ್ಲಿ ಜನ್ಮದಿನ ಆಚರಿಸುತ್ತಿರುವ ಅಭಿಮಾನಿಗಳಿಗೆ ಧನ್ಯವಾದ ಎನ್ನುತ್ತ ಭಾವುಕರಾದರು.

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಕಾಂಗ್ರೆಸ್ ಮುಖಂಡರಾದ ಪಿ.ಎಚ್. ನೀರಲಕೇರಿ, ಎ.ಎಂ. ಹಿಂಡಸಗೇರಿ, ಅಲ್ತಾಫ ಹಳ್ಳೂರ, ಎಫ್.ಎಚ್. ಜಕ್ಕಪ್ಪನವರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net