

ವಿಜಯವಾಣಿ ಸುದ್ದಿಜಾಲ ಧಾರವಾಡ
ನಾಗರಪಂಚಮಿ ನಿಮಿತ್ತ ಕೇಂದ್ರ ಪುರಸ್ಕೃತ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಂದ ಉತ್ಪಾದಿಸುವ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆ. 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಜಿಪಂ ಕಾರ್ಯಾಲಯದ ಆವರಣದಲ್ಲಿ ಆಯೋಸಲಾಗಿದೆ.
ಮೇಳದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ತಯಾರಿಸಿದ ವಿವಿಧ ತರಹದ ಉಂಡೆಗಳು, ಚಕ್ಕಲಿ ಮತ್ತು ಚೂಡಾ, ಬಟ್ಟೆಗಳ, ಅಲಂಕಾರಿಕ ವಸ್ತುಗಳ, ಮಣ್ಣಿನ ನಾಗಪ್ಪ ಹಾಗೂ ಪೂಜಾ ಸಾಮಗ್ರಿಗಳು, ಊಟ, ತಿಂಡಿ ಮತ್ತು ಚಹಾ ಮಳಿಗೆಗಳನ್ನು ಒಳಗೊಂಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾಗಿದೆ. ಜನರು ಇದರ ಸದುಪಯೋಗ ಪಡೆಯಬೇಕು ಎಂದು ಜಿಪಂ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.