ಮಳವಳ್ಳಿ ತಾಲೂಕಲ್ಲಿ ಮಹನೀಯರ ಸ್ಮರಣೆ

2 mlv 4
ಮಳವಳ್ಳಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಗಾಂಧೀಜಿ, ಲಾಲ್ ಬಹಾದೂರ್ ಶಾಸ್ತ್ರಿ ಅವರ ಜಯಂಣತಿ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ತಹಸೀಲ್ದಾರ್ ಬಿ.ವಿ.ಕುಮಾರ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
Published on

ಮಳವಳ್ಳಿ: ಪಟ್ಟಣದಲ್ಲಿ ತಾಲೂಕು ಆಡಳಿತ ಸೇರಿದಂತೆ ತಾಲೂಕಿನ 39 ಗ್ರಾಮ ಪಂಚಾಯಿತಿ, ಸರ್ಕಾರಿ ಕಚೇರಿಗಳಲ್ಲಿ ಬುಧವಾರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.


ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಬಿ.ವಿ.ಕುಮಾರ್ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಹಾನೀಯರ ಹೋರಾಟದ ಬಗ್ಗೆ ಸ್ಮರಿಸಿದರು. ಅಲ್ಲದೆ ಮಹಾತ್ಮ ಗಾಂಧಿ ಅವರು ಬೆಳಗಾವಿ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿ 100 ವರ್ಷಗಳು ಸಂದಿರುವ ಸ್ಮರಣಾರ್ಥ ‘ಗಾಂಧಿ ಭಾರತ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಳವಳ್ಳಿ ಐ.ಬಿ. ಸರ್ಕಲ್ ಬಳಿಯಿಂದ ಕಾಂಗ್ರೆಸ್ ವತಿಯಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಅಂಬೇಡ್ಕರ್ ಭವನದ ವರೆಗೆ ಆಯೋಜಿಸಿದ್ದ ಕಾಲ್ನಡಿಗೆ ಜಾಥಾದಲ್ಲಿ ನೂರಾರು ಕಾರ್ಯಕರ್ತರು ಬಿಳಿಬಟ್ಟೆ ಹಾಗೂ ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕಿದರು. ನಂತರ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದರು.

ತಾಲೂಕಿನ 39 ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮಸಭೆಗಳನ್ನು ನಡೆಸಿದರೆ, ಕೆಲ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಸರ್ಕಾರಿ ಶಾಲೆಗಳಲ್ಲಿ ಬಾಪೂಜಿ ಮತ್ತು ಶಾಸ್ತ್ರಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net