ಎಲ್ಲರೂ ಒಂದೇ ಎನ್ನುವ ಸಂದೇಶ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು

18sunti04
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: NightHDR; cct_value: 0; AI_Scene: (16, -1); aec_lux: 59.0; hist255: 0.0; hist252~255: 0.0; hist0~15: 0.0;
Published on

ಸುಂಟಿಕೊಪ್ಪ : ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎನ್ನುವ ಶ್ರೀ ನಾರಾಯಣ ಗುರುಗಳ ಜೀವನ ಸಂದೇಶವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಿದ್ದ 17ನೇ ವರ್ಷದ ಓಣಂ ಆಚರಣೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ನಾರಾಯಣ ಗುರುಗಳ ಮುಖ್ಯ ಸಂದೇಶವನ್ನು ಜನರಿಗೆ ತಿಳಿಸಬೇಕು. ಸಮಾಜದ ಬಾಂಧವರು ಉನ್ನತ ಶಿಕ್ಷಣ ಪಡೆಯಬೇಕು. ವಿವಿಧತೆಯಲ್ಲಿ ಏಕತೆ ಕಾಣಬೇಕು. ಈ ನಿಟ್ಟಿನಲ್ಲಿ ಸುಂಟಿಕೊಪ್ಪ ಮಲಯಾಳಿ ಸಮಾಜ ತನ್ನ ಸೇವೆ ನೀಡುತ್ತ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಪ್ರತಿಯೊಬ್ಬರೂ ಕಾನೂನಿಗೆ ಗೌರವ ನೀಡಬೇಕು ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ.ಲತೀಫ್ ಮಾತನಾಡಿ, ಎಲ್ಲರು ಪರಸ್ಪರ ಸಹೋದರತೆಯಿಂದ ಸಾಮರಸ್ಯದಿಂದ ಬಾಳಬೇಕು ಎಂದು ಸಲಹೆ ನೀಡಿದರು.

ಮಡಿಕೇರಿ ಹಿಂದು ಮಲಯಾಳಿ ಸಮಾಜದ ಸ್ಥಾಪಕಾಧ್ಯಕ್ಷ ಕೆ.ಎಸ್. ರಮೇಶ್ ಮಾತನಾಡಿ, ಕುಲ ಬಾಂಧವರು ತಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕೊಡಗು ಜಿಲ್ಲೆ ಕೂಡ ಮಾದಕ ವ್ಯಸನಿಗಳ ಆಶ್ರಯ ತಾಣವಾಗುತ್ತಿದ್ದು, ಇದರಲ್ಲಿ ಯುವ ಜನಾಂಗ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಜಿಲ್ಲಾ ಹಿಂದು ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ.ವಿಜಯನ್, ಮಡಿಕೇರಿ ತಾಲೂಕಿನ ಖಜಾಂಜಿ ದಿನೇಶ್, ಮಡಿಕೇರಿ ಎಸ್‌ಎನ್‌ಡಿಪಿ ಅಧ್ಯಕ್ಷ ವಾಸುದೇವನ್ ಇತರರು ಇದ್ದರು.

ಕಾರ್ಯಕ್ರಮದ ಅಂಗವಾಗಿ ಪೂಕಳಂ ಸ್ಪರ್ಧೆ ಆಯೋಜಿಸಲಾಗಿತ್ತು. ನಾರಾಯಣ ಗುರುಗಳ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ನಿವೃತ್ತ ಯೋಧರಾದ ಪ್ರಶಾಂತ್, ಶಿವಪ್ರಸಾದ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್, ಪ್ರವೀಣ್ ಹಾಗೂ ಮಹಿಳಾ ಕಾನ್‌ಸ್ಟೇಬಲ್ ಆಶಾ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net