

ವಿರಾಜಪೇಟೆ: ತಾಲೂಕು ಕೊಟ್ಟೋಳ್ಳಿ ಗ್ರಾಮದ ಕೆ.ಬೋಯಿಕೇರಿ ಆಶ್ರಯ ಕಾಲನಿಗೆ ಬುಧವಾರ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ಅಲ್ಲಿನ ನಿವಾಸಿಗಳ ಕುಂದುಕೊರತೆ ಆಲಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಏಳಿಗೆಗಾಗಿ ಹಲವಾರು ಕಾರ್ಯಕ್ರಮ ರೂಪಿಸಿದ್ದು, ಇದರ ಸದುಪಯೋಗವನ್ನು ಕಾಲನಿ ನಿವಾಸಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು. ಆಶ್ರಯ ಕಾಲನಿ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಶಾಸಕರು, ಎಲ್ಲರೂ ವಿದ್ಯಾವಂತರಾಗಿ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉತ್ತಮ ಸಾಧನೆ ಮಾಡಿ ಎಂದು ಕಿವಿಮಾತು ಹೇಳಿದರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷ ನಡಿಕೇರಿಯಂಡ ಮಹೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜೇಫ್ರಿ ಉತ್ತಪ್ಪ, ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್, ಪಂಚಾಯತಿ ಸದಸ್ಯರಾದ ಇಸ್ಮಾಯಿಲ್, ಪವಿತ್ರಾ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.