ಎಲೆಬಿಚ್ಚಾಲಿ ಏಕಶಿಲಾ ವೃಂದಾವನ ಜಲಾವೃತ

raichur
raichur
Published on

ರಾಯಚೂರು ತಾಲೂಕಿನ ತುಂಗಭದ್ರಾ ನದಿ ತೀರದಲ್ಲಿರುವ ಎಲೆಬಿಚ್ಚಾಲೆಯಲ್ಲಿರುವ ರಾಯರ ಏಕಶಿಲಾ ವೃಂದಾವನ ತುಂಗಭದ್ರಾ ನದಿ ಪ್ರವಾಹಕ್ಕೆ ಮಂಗಳವಾರ ಜಲಾವೃತವಾಗಿದೆ.

ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿವುದರಿಂದ ತುಂಗಭದ್ರಾ ಜಲಾಶಯದಿಂದ 26 ಗೇಟ್ ಮೂಲಕ ನದಿಗೆ 1.40 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿರುವುದರಿಂದ ನದಿ ಮೈದುಂಬಿ ಹರಿಯುತ್ತಿರುವುದರಿಂದ ಬಿಚ್ಚಾಲಮ್ಮ ದೇವಿ ದೇವಾಲಯ ಬಳಿಯ ರಾಯರ ವೃಂದಾವನಕ್ಕೆ ನೀರು ನುಗ್ಗಿದೆ.

ಗುರು ರಾಘವೇಂದ್ರ ಸ್ವಾಮಿಗಳು ತಪ್ಪಸ್ಸು ಮಾಡಿದ್ದ ಜಪದ ಕಟ್ಟೆ ಸಂಪೂರ್ಣ ಜಲಾವೃತವಾಗಿದ್ದು, ಮಂತ್ರಾಲಯಕ್ಕೆ ಬರುವ ಭಕ್ತರು ಎಲೆಬಿಚ್ಚಾಲಿಗೆ ತಪ್ಪದೇ ಭೇಟಿ ನೀಡುತ್ತಾರೆ. ರಾಯರ ವೃಂದಾವನಕ್ಕೆ ನೀರಿನಲ್ಲೇ ತೆರಳಿ ಅರ್ಚಕರು ಪೂಜೆ, ಅಭಿಷೇಕ ಮಾಡಲು ಸಾಹಸಪಡುತ್ತಿದ್ದಾರೆ.

ರಾಯರ ಪರಮ ಭಕ್ತ ಅಪ್ಪಣ್ಣಾಚಾರ ನಿರ್ಮಿಸಿ ಪೂಜಿಸುತ್ತಿದ್ದ ವೃಂದಾವನ ಈಗ ಜಲಾವೃತವಾಗಿದೆ. ಗ್ರಾಮದ ಬಿಚ್ಚಾಲಮ್ಮ ದೇವಾಲಯ ಸುತ್ತಲೂ ನೀರು ಆವರಿಸಿದ್ದು, ಉಗ್ರನರಸಿಂಹ ದೇವಾಲಯ, ನಾಗದೇವತೆ ಕಟ್ಟೆ, ಶಿವಲಿಂಗ ಜಲಾವೃತವಾಗಿದ್ದು ಮುಳುಗಡೆ ಹಂತದಲ್ಲಿವೆ. ಏಕಶಿಲಾ ವೃಂದಾವನ ದರ್ಶನ ಪಡೆಯಲು ಭಕ್ತರು ಪರದಾಟ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net