ಮುಡಾ ಬಹುಕೋಟಿ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ

muda
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ 50:50 ನಿವೇಶನ ಹಂಚಿಕೆಯಲ್ಲಿನ ಬಹುಕೋಟಿ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ನಗರ ಪಾಲಿಕೆ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಕೆ.ಆರ್.ಕ್ಷೇತ್ರದ ಆಶ್ರಯ ಬಡಾವಣೆ ನಿವಾಸಿಗಳಿಗೆ ಹಕ್ಕು ಪತ್ರ, ಹಕ್ಕು ಖುಲಾಸೆ ಹಾಗೂ ಎನ್‌ಓಸಿ ವಿತರಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಮೆತ್ತಗಾಗಿದ್ದಾರೆ. ಸಿದ್ದರಾಮಯ್ಯ ಅವರು ಮೊದಲಿನಂತಿಲ್ಲ ಎಂದು ಟೀಕಿಸಿದರು.

ಮುಡಾ ಬಹುಕೋಟಿ ಹಗರಣ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಇದರ ಬಗ್ಗೆ ಚರ್ಚೆ ಆಗುತ್ತದೆ. ಸದ್ಯಕ್ಕೆ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಆಗುತ್ತಿದೆ. ಶುಕ್ರವಾರ ಅಥವಾ ಸೋಮವಾರ ಮುಡಾ ಹಗರಣದ ಬಗ್ಗೆ ಮಾತನಾಡುತ್ತೇವೆ. ಮುಡಾ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net