

ಮೈಸೂರು: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ದೇವರಾಜ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕುಂಬಾರ ಕೊಪ್ಪಲಿನ ನಿವಾಸಿ ಸುನೀಲ್ ಅಲಿಯಾಸ್ ದತ್ತು(25) ಕೊಲೆಯಾದ ಯುವಕ. ಸುನೀಲ್ ಕೂಡ ಹಲವು ಕಳ್ಳತನ, ಸುಲಿಗೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಬುಧವಾರ ರಾತ್ರಿ ಬೋಟಿ ಬಜಾರ್ ಬಳಿ ಕರೆಯಿಸಿಕೊಂಡು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ದೃಶ್ಯಗಳು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಮೂರ್ನಾಲ್ಕು ಜನರು ಕೃತ್ಯದಲ್ಲಿ ಭಾಗಿಯಾಗಿದ್ದು, ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.