ಪಂಚಾಯಿತಿ, ನಗರಸಭೆಯ ನಕಲಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲ ಪತ್ತೆ

seal
ನಕಲಿ ಸೀಲು ಹಾಗೂ ಸಹಿ ಬಳಸಿ ಸಿದ್ಧಪಡಿಸಿದ ದಾಖಲೆ.
Published on

ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕರು ಪತ್ತೆ ಹಚ್ಚಿದ್ದಾರೆ.

ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದು, ನಗರಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ತಾಲೂಕಿನ ಎಲ್ಲ ಪಂಚಾಯಿತಿ, ಕಡಬ, ಸುಳ್ಯ, ಬಂಟ್ವಾಳ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳ ನಕಲಿ ದಾಖಲೆಗಳನ್ನು ಸಿದ್ಧಪಡಿಸಿಕೊಡುತ್ತಿದ್ದನು.

ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲು ಎಂ.ಎಸ್.ಕಾಂಪ್ಲೆಕ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಬಿ ಇಲೆಕ್ಟ್ರಿಕ್ಸ್ ಮತ್ತು ಪ್ಲಂಬಿಂಗ್‌ನಲ್ಲಿ ನಕಲಿ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಈ ಸಂದರ್ಭ ಪೌರಾಯುಕ್ತ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸೀಲುಗಳು ಪತ್ತೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net