ನಾಳೆ ನೂತನ ಕಟ್ಟಡ ಉದ್ಘಾಟನೆ: ಅಜೀಜ್ ಬಸ್ತಿಕಾರ್ ಮಾಹಿತಿ

Upp_inaugurated
Published on

ಉಪ್ಪಿನಂಗಡಿ: ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಫೆ.25 ರಂದು ನಡೆಯಲಿದೆ ಎಂದು ಕಾಲೇಜಿನ ಕಾರ್ಯಾಧ್ಯಕ್ಷ ಅಜೀಜ್ ಬಸ್ತಿಕಾರ್ ತಿಳಿಸಿದರು. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು. ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸರ್ಕಾರದ ವಿವೇಕಾ ಯೋಜನೆಯಡಿ ಒದಗಿಸಲಾದ 3.06 ಕೋಟಿ ರೂ.ವೆಚ್ಚದಲ್ಲಿ ನಾಲ್ಕು ಅಂತಸ್ತಿನ ಈ ಸುಸಜ್ಜಿತ ಕಟ್ಟಡವನ್ನು ಕೇವಲ 9 ತಿಂಗಳ ಅವಧಿಯಲ್ಲಿ ನಿರ್ಮಿಸಲಾಗಿದೆ. ಸುಸಜ್ಜಿತ ಸಭಾಂಗಣ ನಿರ್ಮಾಣ ಬೇಡಿಕೆ ಇದ್ದು, ಶಾಸಕರ ಸ್ಪಂದನೆ ನಿರೀಕ್ಷಿಸಲಾಗಿದೆ ಎಂದರು.

ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಆದಂ ಕೊಪ್ಪಳ, ಇಬ್ರಾಹಿಂ ಯು.ಕೆ., ಅನಿಮಿನೇಜಸ್, ಕಾಲೇಜು ಪ್ರಾಂಶುಪಾಲ ಇಬ್ರಾಹಿಂ, ಉಪನ್ಯಾಸಕ ರಮೇಶ್ ಹೆಚ್.ಜೆ., ಉಷಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net