ದೇಶದಲ್ಲಿ ಹೆಚ್ಚುತ್ತಿದೆ ಮದ್ಯವ್ಯಸನಿಗಳ ಸಂಖ್ಯೆ

ald 1 (1)
Published on

ಆಲ್ದೂರು: ಕಾಲೇಜು ಆವರಣ ಹಾಗೂ ಶಾಲೆ ಆವರಣದಲ್ಲಿ ಮದ್ಯಪಾನ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದು ಹೋಬಳಿ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸಿ. ಸುರೇಶ್ ಹೇಳಿದರು.

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ)ಹಾಗೂ ಹಲವು ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ವಿಶ್ವಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಾತನಾಡಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಪೀಳಿಗೆಯ ವಿದ್ಯಾರ್ಥಿಗಳು ನಾವು ಸ್ವತಂತ್ರರು ಎಂಬ ಭಾವನೆ ಮೈಗೊಡಿಸಿಕೊಂಡು ಹೈಟೆಕ್ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಅವರು ವ್ಯಸನದಿಂದ ಮುಕ್ತರಾಗ ಬೇಕಾದರೆ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಬೇಕು. ನಿರಂತರ ಯೋಗಾಭ್ಯಾಸ ಮಾದಕ ವಸ್ತುಗಳಿಂದ ದೂರವಿರಲು ಸಹಕಾರಿಯಾಗುತ್ತದೆ ಎಂದರು.

ಪಿಎಸ್‌ಐ ರವಿ ಮಾತನಾಡಿ, ಮಾದಕ ವಸ್ತುಗಳಿಗೆ ದಾಸರದವರು ದೇಶದಲ್ಲಿ ಪ್ರತಿದಿನ 10 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪಂಜಾಬ್‌ನಲ್ಲಿ ಮದ್ಯ ವ್ಯಸನಿಗಳ ಸಂಖ್ಯೆ ಹೆಚ್ಚಿದ್ದು ಅವರು ತಮ್ಮ ದೇಹದ ಸ್ವಾಧೀನ ಕಳೆದುಕೊಳ್ಳುತ್ತಿದ್ದಾರೆ. ನಾವು ತೆಗೆದುಕೊಳ್ಳುವ ಕೆಲವು ಔಷಧಗಳಲ್ಲಿ ಡ್ರಗ್ಸ್ ಅಂಶವಿದ್ದು ಇಂತಹ ಡ್ರಗ್ಸ್‌ಗಳನ್ನು ನಿಷೇಧಿಸಲಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿ ನಂದಕುಮಾರ್, ವೀರಶೈವ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರಾಜೇಶ್, ಉಪನ್ಯಾಸಕ ಜೋಸೆಫ್, ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಕುಮಾರಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net