ರೈಲಿಗೆ ತಲೆ ಕೊಟ್ಟು ಅಧಿಕಾರಿ ಆತ್ಮಹತ್ಯೆ

crime
Published on

ಮೈಸೂರು: ನಗರದ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರೈಲಿಗೆ ತಲೆ ಕೊಟ್ಟು ರೈಲ್ವೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ರೈಲ್ವೆಯ ಮೆಕಾನಿಕಲ್ ವಿಭಾಗದ ಸೀನಿಯರ್ ಸೆಕ್ಷನ್ ಇಂಜಿನಿಯರ್ ಪ್ರಭು(45) ಮೃತರು. ಚಿತ್ರದುರ್ಗದ ಚಿಕ್ಕಜಾಜೂರಿನ ಪ್ರಭು ಅವಿವಾಹಿತರಾಗಿದ್ದು, ನಗರದ ಗೋಕುಲಂನಲ್ಲಿ ವಾಸವಾಗಿದ್ದರು.

ಬುಧವಾರ ಮಧ್ಯಾಹ್ನ 1.30ರ ಸಮಯದಲ್ಲಿ ನಿಲ್ದಾಣದ ಪ್ಲಾಟ್‌ಫಾರ್ಮ್‌ಗೆ ಬಂದ ಪ್ರಭು, ಮೈಸೂರು-ಬಾಗಲಕೋಟೆಯ ರೈಲು ಚಲಿಸುತ್ತಿದ್ದ ವೇಳೆ ಏಕಾಏಕಿ ಚಕ್ರಕ್ಕೆ ತಲೆ ಕೊಟ್ಟಿದ್ದು, ಇದರಿಂದ ಅವರ ರುಂಡ ಮತ್ತು ಮುಂಡ ಬೇರ್ಪಟ್ಟಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ರೈಲ್ವೆ ಹಳಿಯಿಂದ ತೆರವುಗೊಳಿಸಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದರಿಗೆ ಹಸ್ತಾಂತರಿಸಲಾಯಿತು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net