ಅಧಿಕಾರಿ ನೇಣಿಗೆ ಶರಣು

WhatsApp Image 2023-08-30 at 6.10.04 PM
Published on

ಮಡಿಕೇರಿ: ಅರಣ್ಯ ಇಲಾಖೆಯ ಸಂಶೋಧನಾ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ಬುಧವಾರ ನಡೆದಿದೆ.


ಮಂಡ್ಯ ಮೂಲದ ರಶ್ಮಿ(೨೭) ಮೃತ ದುರ್ದೈವಿ.


ಅರಣ್ಯ ಇಲಾಖೆ ರಿಸರ್ಚ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ರಶ್ಮಿ, ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಲವಾರ ರಾತ್ರಿ ಮಡಿಕೇರಿಯ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.


ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಧಿಕಾರಿಯ ಅಗಲಿಕೆಗೆ ಮಡಿಕೇರಿಯ ಅರಣ್ಯ ಇಲಾಖೆ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net