ಮೀನು ಹಿಡಿಯಲು ಹೋದವ ನೀರು ಪಾಲು

23mnd1
Published on

ಮುಂಡಗೋಡ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಆಯತಪ್ಪಿ ನೀರಿನಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಅಂದಲಗಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕಲಕೇರಿ ಗ್ರಾಮದ ರಾಜು ಮುಕನಕಟ್ಟಿ (60) ಸಾವನ್ನಪ್ಪಿದ ವ್ಯಕ್ತಿ.

ಈತ ಗುರುವಾರ ರಾತ್ರಿ ಅಂದಲಗಿ ಗ್ರಾಮದ ಕೆರೆಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಆಯ ತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಶಂಕರ ಗೌಡಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net