

ವಿಜಯನಗರ: ಕಳೆದ ವಾರದಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿವೆ. ಈ ನಡುವೆ ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ.
ತುಂಗಭದ್ರಾ ಜಲಾಶಯ ತುಂಬಿದ್ದು, ನದಿಗೆ ನೀರು ಹರಿಸುವುದರಿಂದ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
105.788 ಸಂಗ್ರಹ ಸಾಮರ್ಥ್ಯ ಹೊಂದಿರೋ ಜಲಾಶಯದಲ್ಲಿ, ಸದ್ಯ 73.939 ಟಿಎಂಸಿ ನೀರು ತುಂಬಿದ್ದು, ಒಳಹರಿವು 98 ಸಾವಿರದ 644 ಕ್ಯೂಸೆಕ್ ಇದೆ. 206 ಹೊರಹರಿವು ಇದ್ದು, ಯಾವುದೇ ಕ್ಷಣದಲ್ಲಾದರೂ ನದಿಗೆ ನೀರು ಹರಿಸಲಾಗುವುದು. ಹಾಗಾಗಿ ನದಿ ಪಾತ್ರದ ಜನರಿಗೆ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ.
ವಿಜಯನಗರ, ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಗಳು ಸೇರಿದಂತೆ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕರ್ನೂಲು, ಮೆಹಬೂಬ್ ನಗರ, ಅನಂತಪುರಂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಪತ್ರ ಬರೆಯಲಾಗಿದೆ. (ದಿಗ್ವಿಜಯ ನ್ಯೂಸ್)