ಅಹೋರಾತ್ರಿ ಧರಣಿ ಹಿಂದಕ್ಕೆ

ಅಹೋರಾತ್ರಿ ಧರಣಿ ಹಿಂದಕ್ಕೆ
Published on

ಸಿದ್ದಾಪುರ: ವಿರಾಜಪೇಟೆ ತಾಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ(ಕಲ್ಲಳ್ಳ)ಎಂಬಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸ ವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯಿತಿ ಮುಂದೆ 13 ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಅಧಿಕಾರಿಗಳ ಭರವಸೆ ಹಿನ್ನೆಲೆ ಶನಿವಾರ ಹಿಂಪಡೆಯಲಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಹೇಳಿದರು.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮುಂದಿನ ಕ್ರಮ ಕೈಗೊಂಡು ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಪ್ರಾರಂಭವಾದಲ್ಲಿ ಮತ್ತೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.

ಉಸ್ತುವಾರಿ ಕಳ್ಳಿರ ಸುರೇಶ್, ಖಜಾಂಚಿ ಸರ ತಂಗಮ್ಮ, ಉಮೇಶ್ ಉತ್ತಯ್ಯ, ಕಾಫಿ ಬೆಳೆಗಾರ ಮಿಟ್ಟು ನಂಜಪ್ಪ, ಬೋಪಣ್ಣ, ರಾಮಚಂದ್ರ, ವಿಷ್ಣು, ರೋಹನ್, ಕರುಂಬಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net