ಛಲವಿದ್ದರೆ ಮಾತ್ರ ಸಾಧನೆಯ ಹಾದಿ ಸುಗಮ

Bhoomareddy
Published on

ಗಜೇಂದ್ರಗಡ: ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ ಎಂದು ರೋಣ ಸಿಪಿಐ ಶಿವಾನಂದ ವಾಲಿಕಾರ ಹೇಳಿದರು.

ಪಟ್ಟಣದ ಎಸ್.ಎಂ. ಭೂಮರಡ್ಡಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಎನ್‌ಎಸ್‌ಎಸ್ ಚಟುವಟಿಕೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ, ಆಧುನಿಕ ಜಗತ್ತಿನಲ್ಲಿ ಸ್ಪರ್ಧೆ ಅನಿವಾರ್ಯ. ಇವೆರಡರ ನಡುವೆ ಸಾಮಾಜಿಕ ಜವಾಬ್ದಾರಿಯ ಜತೆಗೆ ಹೊಂದಾಣಿಕೆ ಮಾಡಿಕೊಂಡು ಹೋದರೆ ಮಾತ್ರ ಯಶಸ್ಸು ನಿಶ್ಚಿತ ಎಂದರು.

ಪ್ರಾಚಾರ್ಯ ಸಂಘದ ಜಿಲ್ಲಾಧ್ಯಕ್ಷ ಎಂ.ಸಿ. ಕಟ್ಟಿಮನಿ ಮಾತನಾಡಿ, ವಿದ್ಯಾರ್ಥಿಗಳು ದೇಶಾಭಿಮಾನ, ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು ಎಂದರು.

ಕಾಲೇಜು ಪ್ರಾಚಾರ್ಯ ಜಿ.ಬಿ. ಗುಡಿಮನಿ ಅಧ್ಯಕ್ಷತೆ ವಹಿಸಿದ್ದರು. ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ. ಎಸ್.ಎಸ್. ಶಿವರಡ್ಡಿ, ಎ.ಎಸ್. ವಡ್ಡರ, ಎಸ್.ಎಸ್. ವಾಲಿಕಾರ, ವೈ. ಆರ್. ಸಕ್ರೋಜಿ, ಎಂ.ಎಲ್. ಕ್ವಾಟಿ, ಜ್ಯೋತಿ ಗದಗ, ವಿ.ಎಂ. ಜೂಚನಿ, ಎಸ್.ಕೆ. ಕಟ್ಟಿಮನಿ, ಚೈತ್ರಾ ಗಾಯಕವಾಡ, ಎಂ.ಎಸ್. ನಾಗರಾಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net