ಮಠಾಧೀಶರ ಬೆಂಬಲ ತಪ್ಪಲ್ಲ: ಪ್ರಶ್ನೆ ನೈತಿಕತೆಯದ್ದು

B y Raghavendra
ಬಿ.ವೈ.ರಾಘವೇಂದ್ರ, ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯ
Published on

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರಿಗೆ ಮಠಾಧೀಶರು ಬೆಂಬಲ ವ್ಯಕ್ತಪಡಿಸಿರುವುದು ತಪ್ಪೇನಲ್ಲ. ಆದರೆ ಪಕ್ಷದ ಶಾಸಕರ ಬೆಂಬಲವೂ ಅವಶ್ಯ. ಅದು ತೀರ್ಮಾನವಾಗುವುದು ಸದನದಲ್ಲಿ. ಈಗ ಪ್ರಶ್ನೆ ಇರುವುದು ಬಲಾಬಲದಲ್ಲಿ ಅಲ್ಲ. ಇದು ಸಿದ್ದರಾಮಯ್ಯ ಅವರ ನೈತಿಕ ಪ್ರಶ್ನೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಬಗ್ಗೆ ದೂರು ನೀಡಿರುವವರ ಬಗ್ಗೆ ಕಾಂಗ್ರೆಸ್ ನಾಯಕರು ಕ್ಷುಲ್ಲಕವಾಗಿ ಮಾತನಾಡುತ್ತಿದ್ದಾರೆ. ಸಿಎಂ ಕೂಡಾ ಹಗುರವಾಗಿ ಮಾತನಾಡಿದ್ದಾರೆ. ಈಗ ತನಿಖೆ ನಡೆಯಬೇಕಿದೆ. ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸುವುದು ಒಳ್ಳೆಯದು ಎಂದರು.
ಅಹಿಂದ ಎಂದು ಭಾಷಣ ಮಾಡಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಮಾಡಿದ ಲೂಟಿಗೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಕುಟುಂಬಕ್ಕೆ ಇನ್ನೂ ಪರಿಹಾರ ನೀಡಲು ಈ ಸರ್ಕಾರಕ್ಕೆ ಮನಸ್ಸಿಲ್ಲ ಎಂದು ಕಿಡಿಕಾರಿದರು.
ಹಗರಣದ ಬಗ್ಗೆ ನಡೆದ ತನಿಖೆಯಲ್ಲಿ ಸಚಿವರನ್ನು ಹೊರಗಿಟ್ಟು ದೋಷಾರೋಪಪಟ್ಟಿ ಸಲ್ಲಿಕೆಯಾಗಿದೆ. ರಾಜ್ಯದ ಜನರು ಇದೆಲ್ಲವನ್ನೂ ಗಮನಿಸುತ್ತಿದ್ದಾರೆ. ಕಾಂಗ್ರೆಸ್‌ಗೆ ಸೂಕ್ತ ಸಮಯದಲ್ಲಿ ಜನರು ಉತ್ತರ ನೀಡುತ್ತಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net