

ಬೈಲುಕುಪ್ಪೆ: ಎದೆ ನೋವು ಎಂದು ಕುಸಿದು ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಶನಿವಾರ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ತಿರುಮಲಾಪುರ ಗ್ರಾಮದ ರಾಮಶೆಟ್ಟಿ(49) ಮೃತ. ನಳಂದ ವಿದ್ಯಾ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾನೆ. ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬೈಲುಕುಪ್ಪೆ ಸ್ಮಶಾನದಲ್ಲಿ ಭಾನುವಾರ ಅಂತ್ಯಕ್ರಿಯೆ ನಡೆಯಿತು.