ಅಪಘಾತದಲ್ಲಿ ಗಾಯಗೊಂಡಿದ್ದವ ಮೃತ

bike_Bike Accident_2
ಎರಡು ಬೈಕ್‌ಗಳ ನಡುವೆ ಅಪಘಾತ.
Published on

ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಮೂವರ ಪೈಕಿ ಒಬ್ಬ ಮೃತಪಟ್ಟಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ರಾಚಶೆಟ್ಟಿ ಗ್ರಾಮದ ನಿವಾಸಿ ನೀಲಸಿದ್ದಶೆಟ್ಟಿ (62) ಮೃತಪಟ್ಟವ.

ಜೂ.24 ರಂದು ನೀಲಿಸಿದ್ದಶೆಟ್ಟಿ ಸತ್ತೇಗಾಲದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಕಾರ್ಯಕ್ರಮಕ್ಕೆ ತೆರಳಿದ್ದರು. ನಂತರ ಕಾರ್ಯಕ್ರಮ ಮುಗಿಸಿಕೊಂಡು ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್‌ನಲ್ಲಿ ಊರಿಗೆ ಹಿಂದಿರುಗುವಾಗ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಕಡೆಯಿಂದ ಮನೋಜ್ ಹಾಗೂ ವಿನೋದ್ ಅವರು ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಘಟನೆ ಬಳಿಕ ನೀಲಿಸಿದ್ದಶೆಟ್ಟಿ ತಲೆ, ಕಣ್ಣಿಗೆ ಪೆಟ್ಟಾಗಿ ರಕ್ತ ಸ್ರಾವವಾಗಿತ್ತು. ಅಂತೆಯೇ ಮನೋಜ್ ಹಾಗೂ ವಿನೋದ್ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ನೀಲಿಸಿದ್ದ ಶೆಟ್ಟಿಯನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಜೂ.25 ರಂದು ಮೃತನ ಪುತ್ರ ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದು, ಅಪಘಾತ ಎಸಗಿ ನನ್ನ ತಂದೆ ಸಾವಿಗೆ ಕಾರಣರಾದವರ ಮೇಲೆ ಕ್ರಮವಹಿಸುವಂತೆ ಮನವಿ ಮಾಡಿದ್ದಾರೆ. 2 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು. ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net