ಅಪಘಾತದಲ್ಲಿ ಗಾಯಗೊಂಡಿದ್ದವ ಮೃತ

ಮೂಡಲಗಿರಿ(55)
ಮೂಡಲಗಿರಿ(55)
Published on

ಮಳವಳ್ಳಿ: ಅಪಘಾತದಲ್ಲಿ ಗಾಯಗೊಂಡಿದ್ದ ಪಟ್ಟಣದ ಪೇಟೆಬೀದಿ ನಿವಾಸಿ ಮೂಡಲಗಿರಿ(55) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಹತ್ತು ದಿನಗಳ ಹಿಂದೆ ಮದ್ದೂರು ತಾಲೂಕಿನ ಮಣಿಗೆರೆ ಸಮೀಪ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಪಟ್ಟಣದ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಭಾನುವಾರ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net