ಬೃಹತ್ ಮೆರವಣಿಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾ

Screenshot_2024-01-20-22-41-02-78.jpg
Published on

ಬೆಳಗಾವಿ: ಆಯೋಧ್ಯೆಯಲ್ಲಿ ಶ್ರೀರಾಮಮೂರ್ತಿ ಪ್ರತಿಷ್ಠಾಪನೆ ದಿನವಾದ ಜ. 22ರಂದು ನಗರದ ಸಂಭಾಜಿ ವೃತ್ತದಿಂದ ನಾಥ ಪೈ ವೃತ್ತದವರೆಗೆ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಬೃಹತ್ ಮೆರವಣಿಗೆ ಮಾಡಲು ಅನುಮತಿ ಕೋರಿ ಶ್ರೀರಾಮ ಸೇನಾ ಹಿಂದೂಸ್ತಾನ್ ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್‌ ಪೀಠ ತಿರಸ್ಕರಿಸಿದೆ.
ಸಂಘಟನೆಯ ಅಧ್ಯಕ್ಷ ರಮಾಕಾಂತ ಕೊಂಡೂಸ್ಕ‌ರ್ , ಮೆರವಣಿಗೆಗೆ ಅನುಮತಿ ನೀಡುವಂತೆ ಪೊಲೀಸ್‌ ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಅವರಿಗೆ ಮನವಿ ಸಲ್ಲಿಸಿದ್ದರು. ಆದರೆ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆಯುಕ್ತರು ಅನುಮತಿ ನೀಡಿರಲಿಲ್ಲ.
ಇದನ್ನು ಪ್ರಶ್ನಿಸಿ ರಮಾಕಾಂತ ಅವರು ಹೈಕೋರ್ಟ್‌ನ ಧಾರವಾಡ ಪೀಠದಿಂದ ಅನುಮತಿ ಕೋರಿ ಅರ್ಜಿ ಸಲ್ಲಿಸಿದರು. ಈ ಬಗ್ಗೆ ಪೀಠವು ನಗರ ಪೊಲೀಸ್‌ ಕಮಿಷನರ್‌ರಿಂದ ಮಾಹಿತಿ ಕೇಳಿತ್ತು. ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಇದ್ದು, ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಿದ ಬಗ್ಗೆ ಪೊಲೀಸ್ ಕಮಿಷನರ್ ವಿವರ ನೀಡಿದ್ದರು. ಇದನ್ನು ಆಧರಿಸಿ ಹೈಕೋರ್ಟ್‌ ಪೀಠ ಕೊಂಡೂಸ್ಕ‌ರ್ ಅರ್ಜಿ ತಿರಸ್ಕರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net