ಕೀರ್ತಿ ಸಂದೇಶ ಸಾರಿದ ಹರಿಕಾರ

5blh2 jayanti
Published on

ಬೈಲಹೊಂಗಲ: ಅಧಿಕಾರ, ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಪಟ್ಟಣದ ಹರಳಯ್ಯ ಕಾಲನಿ ಹರಳಯ್ಯ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಅವರ 118ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಜನರು ಆಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು. ಇಂತಹ ಮಹಾನ್ ನಾಯಕರ ಕೊಡುಗೆ, ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಪ್ರಾಧ್ಯಾಪಕ ಪುಂಡಲೀಕ ಮಾದರ ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ, ತಹಸೀಲ್ದಾರ್ ಹನುಮಂತ ಶಿರಹಟ್ಟಿ, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕಾಧ್ಯಕ್ಷ ಮಹಾಂತೇಶ ಕಳ್ಳಿಬಡ್ಟಿ, ಪುರಸಭೆ ಮುಖ್ಯಾಧಿಕಾರಿ ವೀರಪ್ಪ ಹಸಬಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಸ್. ಉಳ್ಳಾಗಡ್ಡಿ, ತಾಪಂ ಇಒ ಕಿರಣ ಘೋರ್ಪಡೆ, ಜಿ.ವೈ. ಭರಮಣ್ಣವರ, ರುದ್ರಪ್ಪ ನಿಂಗನ್ನವರ, ಶಂಕರ ಕೋರಿಕೊಪ್ಪ, ರುದ್ರಪ್ಪ ಮುಂದಿನಮನಿ, ರಮೇಶ ಹಂಚಿನಮನಿ, ಮೋಹನ್ ಮುರಗೋಡ, ಪುಂಡಲೀಕ ರಾಯಬಾಗ ಇತರರಿದ್ದರು. ಎಂ.ಎ್. ಮಕರವಳ್ಳಿ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net