

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಿರೂರಿನ ವಿಶ್ವ ಭಾರತಿ ರಮ್ಯ ನಾಟಕ ಸಂಘದ ವಾಷಿರ್ಕೋತ್ಸವ ನಿಮಿತ್ತ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಏ. 29ರಂದು ಸಂಜೆ 5.30ಕ್ಕೆ ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಸವರಾಜ ಬೆಂಗೇರಿ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತಿ ಸಿದ್ದಲಿಂಗ ಪಟ್ಟಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಕವಿವ ಸಂದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಸಾಹಿತಿ ಬಾಳಣ್ಣ ಶೀಗಿಹಳ್ಳಿ, ಹಿರೇಮಲ್ಲೂರ ಈಶ್ವರನ್ ಕಾಲೇಜಿನ ಪ್ರಾಚಾರ್ಯ ಶಶಿಧರ ತೋಡಕರ ಪಾಲ್ಗೊಳ್ಳುವರು. ಎಂ.ಎಂ. ಕಲಬುಗಿರ್ ರಾಷ್ಟ್ರೀಯ ಸ್ವಾರಕ ಟ್ರಸ್ಟ್ ಅಧ್ಯಕ್ಷ ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು ಎಂದರು.
ಇದೇ ಸಂದರ್ಭದಲ್ಲಿ ಕಲಾವಿದೆ ಪುಷ್ಮಮಾಲಾ ಅಣ್ಣಿಗೇರಿ, ಹುಬ್ಬಳ್ಳಿಯ ಕೆ.ಎನ್. ಮಂಜುನಾಥ ಅವರಿಗೆ ಬಸವ ರಂಗ ಕಲಾ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 5 ಸಾವಿರ ರೂ. ನಗದು, ಸ್ಮರಣಿಕೆ ಒಳಗೊಂಡಿದೆ ಎಂದರು.
ಶ್ರೀ ಬಸವಾನಂದ ಸ್ವಾಮೀಜಿ ಮಾತನಾಡಿ, ರಂಗಭೂಮಿಯಲ್ಲಿ ಬಸವರಾಜ ಬೆಂಗೇರಿ ಅವರು ತತ್ವ ಪ್ರಧಾನ ನಾಟಕಗಳಿಂದ ಛಾಪು ಮೂಡಿಸುತ್ತಿದ್ದಾರೆ. ಕಷ್ಟಗಳು ಎದುರಾದರೂ ರಂಗಭೂಮಿಯಿಂದ ಹಿಂದೆ ಸರಿದಿಲ್ಲ. ಹೀಗಾಗಿ ಸರ್ಕಾರಗಳು ಬೆಂಗೇರಿ ಅವರ ಕಲಾ ಸೇವೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.