‘ಮತ್ತೆ ಮುಖ್ಯಮಂತ್ರಿ’ ನಾಟಕ ಪ್ರದರ್ಶನ ನಾಳೆ

cm nataka
Published on

ಬೆಂಗಳೂರು: ಕನ್ನಡ ಸಂಸ್ಕೃತಿ ದಿನಾಚರಣೆ ಅಂಗವಾಗಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ (ಎಂಸಿಯು) ಕನ್ನಡ ವಿಭಾಗ, ಭಾಷೆ ಮತ್ತು ಸಾಹಿತ್ಯ ಶಾಲೆ ಹಾಗೂ ಭಾರತ್ ಸ್ಕೌಟ್ಸ್ - ಗೈಡ್ಸ್ ಸಂಸ್ಥೆ ಸಹಯೋಗದಲ್ಲಿ ನಟ ‘ಮುಖ್ಯಮಂತ್ರಿ’ ಚಂದ್ರು ಅಭಿನಯದ ‘ಮತ್ತೆ ಮುಖ್ಯಮಂತ್ರಿ’ ನಾಟಕ ಮಂಗಳವಾರ (ಸೆ.17) ಮಧ್ಯಾಹ್ನ 2.30ಕ್ಕೆ ಪ್ರದರ್ಶಿಸಲಾಗುತ್ತದೆ.

ನಗರದ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ರಂಗ ಮಂದಿರದಲ್ಲಿ ಮತ್ತೆ ಮುಖ್ಯಮಂತ್ರಿ ನಾಟಕವನ್ನು ಪ್ರಸ್ತುತಪಡಿಸಲಾಗುತ್ತದೆ. ಹಿರಿಯ ರಂಗಕರ್ಮಿ ಬಿ.ವಿ.ರಾಜಾರಾಂ ನಿರ್ದೇಶಿಸಿರುವ ಹಾಗೂ ವಿಮರ್ಶಕ ಕೆ.ವೈ.ನಾರಾಯಣಸ್ವಾಮಿ ವಿರಚಿತ ನಾಟಕದಲ್ಲಿ ‘ಮುಖ್ಯಮಂತ್ರಿ’ ಚಂದ್ರು ಪ್ರಧಾನ ಪಾತ್ರವನ್ನು ವಹಿಸಲಿದ್ದಾರೆ.

ನಾಟಕ ಪ್ರದರ್ಶನಕ್ಕೂ ಮುನ್ನ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಎಂಸಿಯು ಕುಲಪತಿ ಪ್ರೊ. ಎಲ್.ಗೋಮತಿದೇವಿ, ಭಾರತ್ ಸ್ಕೌಟ್ಸ್ - ಗೈಡ್ಸ್‌ನ ಕರ್ನಾಟಕ ವಿಭಾಗದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಹಾಗೂ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮುಖ್ಯ ಅತಿರ್ಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸತತ 45 ವರ್ಷಗಳಿಂದ ಪ್ರದರ್ಶಿತವಾಗುತ್ತಿರುವ ಮುಖ್ಯಮಂತ್ರಿ ನಾಟಕಕ್ಕಿಂತ ಈ ಬಾರಿ ಪ್ರದರ್ಶನವಾಗಲಿರುವ ‘ಮತ್ತೆ ಮುಖ್ಯಮಂತ್ರಿ’ ನಾಟಕವು ವಿಭಿನ್ನವಾಗಿ ಮೂಡಿಬರಲಿದೆ ಎಂದು ‘ಮುಖ್ಯಮಂತ್ರಿ’ ಚಂದ್ರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net