ಪತ್ರಿಕಾ ರಂಗಕ್ಕೆ ಪ್ರಸ್ತುತ ಹೆಚ್ಚಿನ ಜವಾಬ್ದಾರಿ

20KMD-1A
ಕೆ.ಎಂ.ದೊಡ್ಡಿಯಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪನವರ ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್ ಗುರೂಜಿ ದೀಪ ಬೆಳಗಿಸಿ ಉದ್ಘಾಟಿಸಿದರು.
Published on

ಕೆ.ಎಂ.ದೊಡ್ಡಿ: ರಾಜ್ಯಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ದಿನನಿತ್ಯದ ಕಾರ್ಯ ಚಟುವಟಿಕೆಗಳನ್ನು ಹದ್ದಿನ ಕಣ್ಣಿಟ್ಟು ಕಾಯುವ ಪತ್ರಿಕಾ ರಂಗವು ಪ್ರಸ್ತುತ ಅಗತ್ಯಕ್ಕಿಂತಲೂ ಹೆಚ್ಚಿನ ಜವಾಬ್ದಾರಿಯುತ ಕಾರ್ಯ ನಿರ್ವಹಿಸುತ್ತಿರುವುದಾಗಿ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪನವರ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಮಲ್ಲೇಶ್ ಗುರೂಜಿ ಹೇಳಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಖಡ್ಗಕ್ಕಿಂತ ಹರಿತವಾದ ಬರವಣಿಗೆ ಮೂಲಕ ಪ್ರತಿಯೊಬ್ಬ ವ್ಯಕ್ತಿಯನ್ನು ಎಚ್ಚರಿಸುವ ಕಾರ್ಯಕ್ಕೆ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಕೆಂಗೇರಿ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಶ್ರೀಗಳು ಕೃಷಿ, ಕೈಗಾರಿಕೆ, ತಂತ್ರಜ್ಞಾನ ಮತ್ಯಾವುದೇ ಕ್ಷೇತ್ರದಲ್ಲಿಯೂ ಪತ್ರಿಕಾ ರಂಗದ ಕಾರ್ಯ ಚಟುವಟಿಕೆ ಭಾಗವಹಿಸುವಿಕೆ ಇಲ್ಲದ ಸಂದರ್ಭ ಊಹಿಸಲು ಅಸಾಧ್ಯ. ಎಲ್ಲ ಬೆಳವಣಿಗೆಗಳಿಗೂ ಈ ಕ್ಷೇತ್ರ ಸಹಕಾರಿ ಎುಂದರು.

ಕಾರ್ಯಕ್ರಮದ ವೇಳೆ ಅಭಿನಂದನೆ ಸ್ವೀಕರಿಸಿ ಉದ್ಯಮಿ ಎಚ್.ಎಲ್.ಸತೀಶ್ ಮಾತನಾಡಿ, ಮದ್ದೂರು ತಾಲೂಕು ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣ ಸಂಬಂಧ ತಮ್ಮ ಸಂಸ್ಥೆ ವತಿಯಿಂದ ಒಂದು ಲಕ್ಷ ರೂ. ಅನುದಾನ ಘೋಷಿಸಿದರು.

ಅಭಿನಂದನೆ: ವಿಜಯವಾಣಿ ಪತ್ರಿಕೆಯ ಚಾಮರಾಜನಗರ ಜಿಲ್ಲಾ ವರದಿಗಾರ ಕಿರಣ್ ಮಾದರಹಳ್ಳಿ, ಪತ್ರಿಕಾ ವಿತರಕ ಪೂರ್ಣಚಂದ್ರ ತೇಜಸ್ವಿ, ಪ್ರಸಕ್ತ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣಳಾದ ಎಂ.ವಿ.ಜೀವಿತಾ ಅವರನ್ನು ಕಾರ್ಯಕ್ರಮದ ವೇಳೆ ಅಭಿನಂದಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತಿಕೆರೆ ಜಯರಾಮು ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ಕುಟುಂಬ ಸದಸ್ಯರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಜಿಲ್ಲಾ ಸಂಘದ ಅಧ್ಯಕ್ಷ ನವೀನ್‌ಕುಮಾರ್, ರಾಜ್ಯ ಕಾರ್ಯದರ್ಶಿ ಕೆರಗೋಡು ಸೋಮಶೇಖರ್, ರಾಜ್ಯ ಸಮಿತಿ ಸದಸ್ಯ ಸಿ.ಎನ್.ಮಂಜುನಾಥ್, ಜಿಲ್ಲಾ ಸಮಿತಿ ಕಾರ್ಯದರ್ಶಿ ಆನಂದ್, ಉಪಾಧ್ಯಕ್ಷ ರವಿಸಾವಂದಿಪುರ, ಕೋಶಾಧ್ಯಕ್ಷ ನಂಜುಂಡಸ್ವಾಮಿ, ಜಿಲ್ಲಾ ನಿರ್ದೇಶಕ ಶಿವನಂಜಯ್ಯ, ತಾಲೂಕು ಅಧ್ಯಕ್ಷ ಎಂ.ಆರ್. ಚಕ್ರಪಾಣಿ, ಕಾರ್ಯದರ್ಶಿ ಎಂ.ಪಿ. ವೆಂಕಟೇಶ್, ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net