ದೇಶದಲ್ಲಿ ಪ್ರಧಾನಿ ಪ್ರಭಾವಿ ರಾಜಕಾರಣಿ- ಶಾಸಕ

Dr_Shivaraj_Patil
Dr_Shivaraj_Patil
Published on

 ರಾಯಚೂರು ಕಳೆದ ಹನ್ನೊಂದು ವರ್ಷದಲ್ಲಿ ದೇಶದಲ್ಲಿ ಉತ್ತಮ ಆಡಳಿತವನ್ನು ನರೇಂದ್ರ ಮೋದಿಯವರು ನೀಡಿದ್ದಾರೆ. 25 ವರ್ಷಗಳ ರಾಜಕೀಯ ಜೀವನದಲ್ಲಿ ಮೋದಿಯವರು ಪ್ರಭಾವಶಾಲಿ ವ್ಯಕ್ತಿಯಾಗಿದ್ದಾರೆಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತವನ್ನು ನೋಡಿ ದೇಶದ ಪ್ರತಿಯೊಬ್ಬ ನಾಗರೀಕರೂ ಕೂಡ ಹೆಮ್ಮೆ ಪಡಬೇಕು. ಕೋವಿಡ್ ಸಂದರ್ಭದಲ್ಲಿ ಒಂದು ವೇಳೆ ಕಾಂಗ್ರೆಸ್ ಆಡಳಿತದಲ್ಲಿದ್ದರೆ ಗತಿ ಏನಾಗುತ್ತಿತ್ತು. ಕೇಂದ್ರ ಬಿಜೆಪಿ ಸರ್ಕಾರಕ್ಕೆ ಶೂನ್ಯ ಅಂಕ ಕೊಡಲು ಸಿಎಂ ಸಿದ್ದರಾಮಯ್ಯ ಯಾರು ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಜಿಎಸ್‌ಟಿ ಹಣ ಬಂದಿಲ್ಲ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರ ಆರೋಪಿಸುತ್ತಿದ್ದು, 5 ಲಕ್ಷ 14 ಸಾವಿರ ಕೋಟಿ ರೂ.ರಾಜ್ಯಕ್ಕೆ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ಮಾಹಿತಿಯಿಲ್ಲದೇ ತೆರಿಗೆ ಹಣ ನೀಡಿಲ್ಲ ಎಂದು ಕೋರ್ಟ್‌ಗೆ ಹೋಗಿರುವ ರಾಜ್ಯ ಸರ್ಕಾರ ಜನರನ್ನು ವಂಚಿಸುತ್ತಿದೆ ಎಂದು ತಿಳಿಸಿದರು.

ಜಗತ್ತಿನಲ್ಲಿ ಭಾರತವನ್ನು 4ನೇ ಅತಿ ದೊಡ್ಡ ರಾಷ್ಟ್ರವನ್ನಾಗಿ ಮೋದಿಯವರು ಮಾಡಿದ್ದಾರೆ. ದೇಶದಲ್ಲಿನ ಬಡವರ, ಸಾಮಾನ್ಯ ವರ್ಗದ ಜನರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿದ್ದಾರೆ. ಹೆದ್ದಾರಿಗಳು, ಜನರಿಗೆ ಶುದ್ಧ ಕುಡಿಯುವ ನೀರು, ರೈಲ್ವೆ ಯೋಜನೆಗಳನ್ನು ನೀಡಿದ್ದಾರೆ. ರೈತರು ಮತ್ತು ಕಾರ್ಮಿಕರಿಗೆ ಅನುಕೂಲವಾಗುವ

ಅನೇಕ ಯೋಜನೆಗಳನ್ನು ನೀಡಿದ್ದಾರೆ ಎಂದರು.

ಮಹಾನಗರ ಪಾಲಿಕೆಗೆ ಕೇಂದ್ರದಿಂದ 200 ಕೋಟಿ ಅನುದಾನವನ್ನು ನೀಡಲಾಗಿದ್ದು, ಪಾಲಿಕೆಯ ಶೇ.85ರಷ್ಟು ಅನುದಾನ ಕೇಂದ್ರ ಸರ್ಕಾರದ್ದಾಗಿದೆ. ಪಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದೆ. ನಗರ ವಿದಾನ ಕ್ಷೇತ್ರದಲ್ಲಿ ಬಿಜೆಪಿ ಇದೆ. ಬಿಜೆಪಿ ಸರ್ಕಾರ ವಿರೋಧ ಪಕ್ಷದಲ್ಲಿರುವುದರಿಂದಲೇ ಪಾಲಿಕೆ ಈ ಪರಿಸ್ಥಿತಿಯಲ್ಲಿದೆ. ಒಂದು ವೇಳೆ

ವಿಧಾನಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಆಡಳಿತದಲ್ಲಿದ್ದರೆ ಪಾಲಿಕೆ ಆಡಳಿತ ಹಾಗೂ ನಗರದ ಅಭಿವೃದ್ದಿ ಹದಗೆಟ್ಟು ಹೋಗುತ್ತಿತ್ತು ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ,ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ,ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ. ಲಲಿತಾ ಕಡಗೋಲ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಘವೇಂದ್ರ ಉಟ್ಕೂರ್, ಕೆ.ಕರಿಯಪ್ಪ, ಆಂಜನೇಯ್ಯ ಕಡಗೋಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net