

ಮಸ್ಕಿ: ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನ ಭಾರತೀಯರಿಗೆ ಭಗವದ್ಗೀತೆ ಇದ್ದಂತೆ. ಸಂವಿಧಾನದ ಅಡಿಯಲ್ಲಿ ಭಾರತದ ಆಡಳಿತ ಸುಗಮವಾಗಿ ನಡೆದಿದೆ. ಸಮಾನತೆ, ಸಹೋದರತೆ ತತ್ವಗಳನ್ನು ಸಾರಿದ ಡಾ.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ವಿಚಾರಗಳನ್ನು ಯುವಕರು ಅರಿತು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದ ತಾಪಂ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತ ಸೋಮವಾರ ಹಮ್ಮಿಕೊಂಡಿದ್ದ ಡಾ.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ತಾಪಂ ಇಒ ಅಮರೇಶ ಯಾದವ್, ದೇವನಾಂಪ್ರಿಯ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಮಹಾಂತಗೌಡ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಂಪಾಪತಿ ಹೂಗಾರ ಮಾತನಾಡಿದರು.
ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಮುದ್ದಾಪುರ, ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ, ಸಿಪಿಐ ಬಾಲಚಂದ್ರ ಡಿ.ಲಕ್ಕಂ, ನೀರಾವರಿ ಇಲಾಖೆ ಅಧಿಕಾರಿಗಳಾದ ದಾವುದ್, ಗುರುಸ್ವಾಮಿ, ಜೆಸ್ಕಾಂ ಇಲಾಖೆ ಎಇಇ ವೆಂಕಟೇಶ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಂಕರಕೊಡತಿ, ಶಿಕ್ಷಣ ಇಲಾಖೆ ಅಧಿಕಾರಿ ರಾಮಸ್ವಾಮಿ ಇದ್ದರು. ಇದಕ್ಕೂ ಮುನ್ನ ಗಾಂಧಿನಗರದಲ್ಲಿರುವ ಡಾ.ಅಂಬೇಡ್ಕರ್ ಮೂರ್ತಿಗೆ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ತೆರೆದ ವಾಹನದಲ್ಲಿ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.