ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

5 SND 3
ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣಕ್ಕೆ ಸಿಎಂ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ನಿತೀಶ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಶಾಸಕ ಆರ್.ಬಸನಗೌಡ ತುರ್ವಿಹಾಳ, ಲಿಂಗಸುಗೂರು ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ತುರ್ವಿಹಾಳ ಪಪಂ ಅಧ್ಯಕ್ಷ ಶಾಮೀದ್‌ಸಾಬ್, ತಹಸೀಲ್ದಾರ್ ಅರುಣ್ ದೇಸಾಯಿ, ಡಿಎಚ್‌ಒ ಸುರೇಂದ್ರಬಾಬು ಇದ್ದರು.
Published on

ಸಿಂಧನೂರು: ಫೆ.23 ರಂದು ತುರ್ವಿಹಾಳ ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರು ಆಗಮಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೀಶ ಕೆ. ಬುಧವಾರ ಹೇಳಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ವಿವಿಧ ಇಲಾಖೆಗಳಿಗೆ ಕೆಲಸಗಳನ್ನು ನಿಯೋಜಿಸಲಾಗಿದ್ದು, ಆ ಎಲ್ಲ ಕೆಲಸಗಳನ್ನೂ ಹಗಲು-ರಾತ್ರಿ ಎನ್ನದೇ ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಸ್ವಚ್ಛತೆ, ಶುದ್ಧ ಕುಡಿಯುವ ನೀರು, ಆಹಾರ ಪೂರೈಕೆ ಎಲ್ಲ ಕೆಲಸಗಳು ಸರಿಯಾಗಿ ಆಗಬೇಕು. ಈಗಾಗಲೇ 25 ಅಭಿವೃದ್ಧಿ ಕೆಲಸಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಉದ್ಘಾಟನೆ ಹಾಗೂ ಭೂಮಿಪೂಜೆಗೆ ಸಂಬಂಧಿಸಿದ ಶಿಲಾ ಕಲ್ಲು ಶಿಷ್ಟಾಚಾರದನ್ವಯ ಸಿದ್ಧಪಡಿಸಿ ಫೆ. 14 ರೊಳಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಟ್ಟಿಸಬೇಕು ಎಂದರು.

25 ಸಾವಿರ ಜನ ಸೇರುವ ನಿರೀಕ್ಷೆಯಿದ್ದು, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿ, ತುರ್ವಿಹಾಳ ಪಟ್ಟಣಕ್ಕೆ ಮುಖ್ಯಮಂತ್ರಿಗಳು ಮೊಟ್ಟಮೊದಲ ಬಾರಿ ಆಗಮಿಸುತ್ತಿದ್ದು, ಯಾವುದೇ ಲೋಪಗಳಾಗದಂತೆ ಕ್ರಮಕೈಗೊಳ್ಳಬೇಕು. ಮುಖ್ಯಮಂತ್ರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ, ಸಚಿವರಾದ ಸತೀಶ ಜಾರಕಿಹೊಳಿ, ಎನ್‌ಎಸ್ ಬೋಸರಾಜು, ಶಿವರಾಜ ತಂಗಡಗಿ, ಶರಣ ಪ್ರಕಾಶ ಪಾಟೀಲ್ ಆಗಮಿಸುವರು ಎಂದರು. ತಾಪಂ ಇಒ ಚಂದ್ರಶೇಖರ, ಡಿವೈಎಸ್ಪಿ ಬಿಎಸ್ ತಳವಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net