

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಬಾಲವಿಕಾಸ ಅಕಾಡೆಮಿಯು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅಕಾಡೆಮಿಯ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ನಗರ ಹೊರವಲಯದ ನೇಚರ್ -Àಸ್ಟ್ ಇಕೋ ವಿಲೇಜ್‌ನಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯು ರಾಜ್ಯದ ಬಾಲಮಂದಿರದ ಮಕ್ಕಳಿಗಾಗಿ ಆಯೋಜಿಸಿರುವ ರಾಜ್ಯ ಮಟ್ಟದ ಕಥಾಕಮ್ಮಟ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಕಾಡೆಮಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು. ಬಾಲಮಂದಿರದ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರ ಕಾರ್ಯ ತೃಪ್ತಿ ತಂದಿದೆ. ಬಾಲ ಮಂದಿರದ ಮಕ್ಕಳಿಗಾಗಿ ಕೈಗೊಳ್ಳುವ ಕಾರ್ಯಕ್ರಮಗಳಿಗೆ ನಮ್ಮ -Ëಂಡೇಶನ್‌ನಿ0ದ ಸಹಕಾರ ನೀಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಮಕ್ಕಳು ದೇವರ ಸಮಾನ. ಅವರ ಸೇವೆ ಮಾಡುವ ಸದವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದರು.
ಜಿಲ್ಲಾಽಕಾರಿ ದಿವ್ಯ ಪ್ರಭು, ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಎಸ್.ಆರ್. ಪಾಟೀಲ, ಮಲ್ಲನಗೌಡ ಪಾಟೀಲ, ಬಸವರಾಜ ಮರಿತಮ್ಮನವರ, ಯೋಜನಾಽಕಾರಿ ಭಾರತಿ ಶೆಟ್ಟರ, ಉಪ ನಿರ್ದೇಶಕ ರತ್ನಾಕರ, ದೀಪಾ ಜಾವೂರ, ಹಳ್ಳಿಗೇರಿ ಗ್ರಾಮ ಪಂಚಾಯಿತಿ ಪದಾಽಕಾರಿಗಳು ಹಾಗೂ 9 ಜಿಲ್ಲೆಗಳ ಬಾಲಮಂದಿರದ ಮಕ್ಕಳು ಉಪಸ್ಥಿತರಿದ್ದರು.