ಸಿದ್ದರಾಮಯ್ಯ ನೇತೃತ್ವದಲ್ಲಿ ತಂದಿರುವ ಯೋಜನೆಗಳು ಜನಮನ ಗೆದ್ದಿವೆ: ಸಚಿವ ಸಂತೋಷ ಲಾಡ್

New Project (4)
Published on

ಮಹದೇವಪುರ: ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರಾಜ್ಯದ ಜನತೆಯ ಅಭಿವೃದ್ಧಿಗೆ ಪಣತೊಟ್ಟಿದ್ದು, ಜನಪರ ಆಡಳಿತ ಮೂಲಕ ಜನತೆಗೆ ಆಸರೆ ಯಾಗಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಜೈ ಶ್ರೀರಾಮ್ ಸೇವಾ ಸಮಿತಿ ವತಿಯಿಂದ ಮಹದೇವಪುರ ಕ್ಷೇತ್ರದ ವರ್ತೂರಿನಲ್ಲಿ ಏರ್ಪಡಿಸಿದ್ದ ನಾಲ್ಕನೆ ವರ್ಷದ ವಿಜೃಂಭಣೆಯ ದಸರಾ ಮಹೋತ್ಸವಕ್ಕೆ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿ ಮಾತನಾಡಿದರು.

ಗ್ಯಾರಂಟಿಗಳ ಸಮರ್ಪಕ ಅನುಷ್ಠಾನದಿಂದ ಬಡವರ ಜೀವನ ಹಸನಾಗಿದೆ. ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಮಂದಿ ಪ್ರಯೋಜನ ಪಡೆದಿದ್ದಾರೆ. ನಮ್ಮ ಯೋಜನೆಗಳು ಜನಪರ ವಾಗಿದ್ದು, ಮನೆಮನಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮತ್ತಷ್ಟು ಜನಪರ ಯೋಜನೆಗಳ ಮೂಲಕ ಸಮಗ್ರ ಅಭಿವೃದ್ಧಿಗೆ ಮುನ್ನಡೆ ಬರೆಯಲಾಗುವುದು ಎಂದು ಹೇಳಿದರು.

ಜೈ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಕುಪ್ಪಿ ಮಂಜುನಾಥ ಅವರು ಮಾತನಾಡಿ

ವರ್ತೂರು ಸರ್ಕಾರಿ ಕಾಲೇಜು ಆವರಣದಲ್ಲಿ ದೇವಾಲಯದ ರೀತಿ ಅಲಂಕಾರ ಮಾಡಿ ದುರ್ಗಾದೇವಿಯ ಪ್ರತಿಷ್ಠಾಪನೆ ಮಾಡಿ ವಿಜೃಂಭಣೆಯಿಂದ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು

ಮುಂದಿನ ದಿನಗಳಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಬದಲಾವಣೆಯ ಪರ್ವ ಬರಲಿದ್ದು, ರಾಜ್ಯ ಸರ್ಕಾರದ ಅಭಿವೃದ್ಧಿ ಮಾರ್ಗದಲ್ಲಿ ಕ್ಷೇತ್ರ ಮುನ್ನಡೆಯಲಿದೆ ಎಂದು ಹೇಳಿದರು. ಕ್ಷೇತ್ರದಲ್ಲಿ ಕೆಲ ಮುಖಂಡರು ರಾಜ್ಯ ಸರ್ಕಾರದ ಕಾರ್ಯ ಮತ್ತು ಯೋಜನೆಗಳು ಹಾಗೂ ಕಾಮಗಾರಿಗಳನ್ನು ನಮ್ಮ ಕೆಲಸದಂತೆ ಬಿಂಬಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ನಾಗೇಶ್,ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಪೂರ್ವ ಜಿಲ್ಲಾಧ್ಯಕ್ಷ ನಂದಕುಮಾರ್,ಗ್ಯಾರಂಟಿ ಅಧ್ಯಕ್ಷ ಪ್ರಶಾಂತ್,ಕ್ಷೇತ್ರದ ಗ್ಯಾರಂಟಿ ಅಧ್ಯಕ್ಷ ಸುರೇಶ್,ಬ್ಲಾಕ್ ಅಧ್ಯಕ್ಷರಾದ ಶ್ರೀನಿವಾಸ್ ರೆಡ್ಡಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net