ಜಾಗೃತಿ ಮೂಡಿಸುವುದೇ ಉದ್ದೇಶ

30 chimmada-1
ಚಿಮ್ಮಡ ಗ್ರಾಮದಲ್ಲಿ ನಡೆದ ಡೆಂೆ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ವಿಬಿಡಿ ಮೇಲ್ವಿಚಾರಕ ನರಸಿಂಹ ಗಲಗಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ.ಎಸ್. ತಳ್ಳಿ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಮಾಲಾ ಅಶೋಕ ಮೋಟಗಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಎಂ.ಬಿ. ಸಣ್ಣಕ್ಕಿ, ಸಾಂಕ್ರಾಮಿಕ ರೋಗಗಳ ತಜ್ಞ ಡಾ. ಭಾಗ್ಯವಂತ ಪಿಎಚ್‌ಸಿ ಮೇಲ್ವಿಚಾರಕ ಜಿ.ಎಸ್. ಮುಸಳಿ ಇತರರಿದ್ದರು.
Published on

ಚಿಮ್ಮಡ: ವಿಶ್ವ ಆರೋಗ್ಯ ಸಂಸ್ಥೆ ಮಾರ್ಗದರ್ಶನದಲ್ಲಿ ಆಚರಿಸಲಾಗುವ ಮಲೇರಿಯಾ, ಡೆಂೆ ದಿನಾಚರಣೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶವಾಗಿದೆ ಎಂದು ತಾಲೂಕು ವಿಬಿಡಿ ಮೇಲ್ವಿಚಾರಕ ನರಸಿಂಹ ಗಲಗಲಿ ಹೇಳಿದರು.

ಸ್ಥಳೀಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡೆಂೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿರುತ್ತದೆ. ಇದರಿಂದ ಡೆಂೆ, ಮಲೇರಿಯಾ, ಚಿಕೂನ್ ಗುನ್ಯಾ, ಮಿದುಳು ಜ್ವರ, ಆನೆಕಾಲು ರೋಗ ಸೇರಿ ಹಲವಾರು ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಮನೆ ಸುತ್ತಲಿನ ಪ್ರದೇಶದಲ್ಲಿ ಗಲೀಜು ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ.ಎಸ್. ತಳ್ಳಿ ಮಾತನಾಡಿ. ಕಾಯಿಲೆ ಬಂದ ಮೇಲೆ ಚಿಕಿತ್ಸೆಗಾಗಿ ಪರದಾಡುವುದಕಿಂತ ಕಾಯಿಲೆ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದೇ ಜಾಣತನ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಮಾಲಾ ಅಶೋಕ ಮೋಟಗಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಎಂ.ಬಿ. ಸಣ್ಣಕ್ಕಿ, ಸಾಂಕ್ರಾಮಿಕ ರೋಗಗಳ ತಜ್ಞ ಡಾ. ಭಾಗ್ಯವಂತ ಪಿಎಚ್‌ಸಿ ಮೇಲ್ವಿಚಾರಕ ಜಿ.ಎಸ್. ಮುಸಳಿ, ಉಪಾಧ್ಯಕ್ಷೆ ಪ್ರೇಮಾ ಪ್ರಭು ಗೋವಿಂದಗೋಳ, ಮಾಜಿ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ, ಆನಂದ ಕವಟಿ, ತಾಪಂ ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಮನೋಜ ಹಟ್ಟಿ, ಬಾಳೇಶ ಬ್ಯಾಕೋಡ, ಅಶೋಕ ಧಡೂತಿ, ರಮೇಶ ಮೇತ್ರಿ, ನಾಗಪ್ಪ ಆಲಕನೂರ, ಮೇಘಾ ಗಾಣಿಗೇರ, ಬಂಗಾರೆವ್ವ ಜಾಲಿಕಟ್ಟಿ, ಗ್ರಾಪಂ ಪಿಡಿಒ ಶಿವಾನಂದ ಬಿರಾದಾರ, ಸಿಆರ್‌ಪಿ ಸಮನ್ವಯ ಅಧಿಕಾರಿ ದ್ರಾಕ್ಷಾಯಿಣಿ ಮಂಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net