ಸುಧಾರಿಸಬೇಕಿದೆ ಶಿಕ್ಷಣದ ಗುಣಮಟ್ಟ

HLY TEACHER
Published on

ಹಳಿಯಾಳ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಶಿಕ್ಷಕರು ಪಾಲಿಸಬೇಕು. ವಿದ್ಯಾರ್ಥಿಗಳು ಉತ್ತಮ ಸ್ಥಾನಕ್ಕೆ ತಲುಪಿದಾಗ ಶಿಕ್ಷಕರನ್ನು ಸ್ಮರಿಸುತ್ತಾರೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟರು.

ಪಟ್ಟಣದ ಕಾರ್ವೆಲ್ ಪ್ರೌಢಶಾಲೆಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರಲ್ಲಿ ಗಾಂಭೀರ್ಯತೆ ಕಡಿಮೆಯಾಗಿದೆ. ಶಿಕ್ಷಣದ ಗುಣಮಟ್ಟ ಸುಧಾರಿಸಬೇಕಿದೆ ಎಂದರು.

ಪುರಸಭೆ ಅಧ್ಯಕ್ಷೆ ದ್ರೌಪತಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ್, ದಾಂಡೇಲಿ ನಗರಸಭೆ ಅಧ್ಯಕ್ಷ ಅಷ್ಪಾಕ ಶೇಕ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ಸತೀಶ್ ನಾಯ್ಕ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net