ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾದ ಮಳೆ

31 ckm 5
ಚಿಕ್ಕಮಗಳೂರು ತಾಲೂಕು ಶಿರವಾಸೆ ಸಮೀಪ ರಸ್ತೆ ಪಕ್ಕದಲ್ಲೇ ಧರೆ ಕುಸಿತ ಆಗಿರುವುದನ್ನು ಪರಿಶೀಲನೆ ನಡೆಸುತ್ತಿರುವ ಶಾಸಕ ಎಚ್.ಡಿ.ತಮ್ಮಯ್ಯ.
Published on

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಆದರೆ ಮಳೆಯ ಹಾನಿ ಮಾತ್ರ ಮುಂದುವರೆದಿದೆ. ಜಿಲ್ಲೆಯ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಕಳಸ, ಎನ್.ಆರ್. ಪುರ, ಚಿಕ್ಕಮಗಳೂರು ಭಾಗದಲ್ಲಿ ಮಳೆರಾಯ ತನ್ನ ಅಬ್ಬರವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಿದ್ದಾನೆ.

ಕಳಸದಲ್ಲಿ ಭೂಮಿಯ ಒಳಗೆ ಜಲ ಸ್ಫೋಟಗೊಂಡ ಪರಿಣಾಮ ಗುಡ್ಡ ಕುಸಿದು ಬಂದು ರಸ್ತೆಗೆ ಜರುಗಿದೆ. ಕಳಸ ತಾಲೂಕಿನ ಬಲಿಗೆ ಗ್ರಾಮದ ಬಳಿ ಘಟನೆ ನಡೆದಿದ್ದು ಕಳಸ, ಬಲಿಗೆ, ಹೊರನಾಡು ನಡುವಿನ ಸಂಪರ್ಕ ಕಡಿತಗೊಂಡಿದೆ. ಕಳಸ, ಜಾಂಬಳೆ, ಕುದುರೆಮುಖ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಪರಿಣಾಮ ಭದ್ರಾ ನದಿಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯಲ್ಲಿ ಗಾಳಿಯ ರಭಸ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮರಗಳು ಧರೆಗುರುಳುವ ಪ್ರಕರಣಗಳು ಕಡಿಮೆಯಾಗಿವೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಭಾಗದಲ್ಲಿ ಸಣ್ಣ ಮಟ್ಟದಲ್ಲಿ ಧರೆಕುಸಿತ ಅಲ್ಲಲ್ಲಿ ಕಾಣಿಸಿಕೊಳ್ಳಲಾರಂಭಿಸಿದೆ. ಗುರುವಾರ ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net