ಶ್ರೀ ಬೆಟ್ಟದ ರಂಗನಾಥಸ್ವಾಮಿ ಜಾತ್ರೆ ಅದ್ಧೂರಿ

ಅರಕಲಗೂಡು ತಾಲೂಕು ಮಣಜೂರು- ದಾಸನಪುರ ಶ್ರೀ ಬೆಟ್ಟದ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ದೇವರ ಮೂಲ ವಿಗ್ರಹಕ್ಕೆ ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಅರಕಲಗೂಡು ತಾಲೂಕು ಮಣಜೂರು- ದಾಸನಪುರ ಶ್ರೀ ಬೆಟ್ಟದ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ದೇವರ ಮೂಲ ವಿಗ್ರಹಕ್ಕೆ ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
Published on

ಅರಕಲಗೂಡು: ತಾಲೂಕಿನ ಮಣಜೂರು- ದಾಸನಪುರ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಬೆಟ್ಟದ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ  ಸಡಗರ ಸಂಭ್ರಮದಿಂದ ನೆರವೇರಿತು.

ಜಾತ್ರೆಯಲ್ಲಿ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಸಾವಿರಾರು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಹೇಮಾವತಿ ಜಲಾಶಯ ತಪ್ಪಲಿನ ಪ್ರಕೃತಿ ಮಡಿಲಲ್ಲಿ ನೂರಾರು ಅಡಿ ಎತ್ತರದಲ್ಲಿರುವ ಬೆಟ್ಟವೇರಿದ ಭಕ್ತರು ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೆ ತಂಡೋಪತಂಡವಾಗಿ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

ದೇವಸ್ಥಾನದಲ್ಲಿ ಬೆಳಗ್ಗೆ ಕಲ್ಯಾಣೋತ್ಸವ ಸೇವೆ, ವಿಶೇಷ ಪೂಜೆ ಕೈಂಕರ್ಯಗಳು ವಿಧಿವತ್ತಾಗಿ ನಡೆದವು. ಭಕ್ತರು ಸರದಿ ಸಾಲಿನಲ್ಲಿ ಸಾಗಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಪುನೀತರಾದರು.

ಸಾವಿರಾರು ಭಕ್ತರಿಗೆ ಅನ್ನ ದಾಸೋಹ ನಡೆಯಿತು. ಜಾತ್ರೆಯಲ್ಲಿ ವಿವಿಧ ವ್ಯಾಪಾರಸ್ಥರು ಭರ್ಜರಿ ವ್ಯಾಪಾರ ನಡೆಸಿದರು. ಬೆಟ್ಟದ ಮೇಲೆ ನಿಂತು ಕಣ್ಣು ಹಾಯಿಸಿದುದ್ದಕ್ಕೂ ಕಾಣುವ ಗೊರೂರು ಹೇಮಾವತಿ ಜಲಾಶಯ ಹಿನ್ನೀರಿನ ಸೊಬಗು ಕಣ್ತುಂಬಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net