

ಉಳ್ಳಾಗಡ್ಡಿ-ಖಾನಾಪುರ: ಸಮೀಪದ ಕುರಣಿ ಗ್ರಾಮದ ನಿವಾಸಿ, ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದ ರವಿ ರಾಜಶೇಖರಯ್ಯ ಹಿರೇಮಠ ಕಳೆದ ತಿಂಗಳು ನಿಧನರಾಗಿದರು.
ಮೃತರ ಮನೆಗೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ರವಿ ಹಿರೇಮಠ ಅವರು ಬೆಳಗಾವಿ, ವಿಜಯಪುರ, ಬಾಗಲಕೋಟೆ ಚಿಕ್ಕೋಡಿ ಸೇರಿ ಬೆಳಗಾವಿ ವಿಭಾದದಲ್ಲಿ ಪಕ್ಷ ಸಂಘಟನೆಗೆ ಸಕ್ರಿಯವಾಗಿ ಶ್ರಮಿಸಿದ್ದರು. ಮೃತ ರವಿ ಅವರ ಮಕ್ಕಳ ವಿದ್ಯಾಭ್ಯಾಸದ ಖರ್ಚುನ್ನು ತಾವು ಭರಿಸುವುದಾಗಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಮಾಜಿ ಸಚಿವ ಶಶಿಕಾಂತ ನಾಯಿಕ, ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ ಹಾಗೂ ಪಕ್ಷದ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.