

ಮೈಸೂರು: ಗುಜರಾತ್‌ನ ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಅಲ್ಲಿನ ಸರ್ಕಾರ ಸ್ವಾತಂತ್ರೃ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಿರುವುದು ಸರಿಯಲ್ಲ ಎಂದು ಕರ್ನಾಟಕ ದಲಿತ ಚಳವಳಿ ನವ ನಿರ್ಮಾಣ ವೇದಿಕೆಯ ಮುಖಂಡ ಹರಿಹರ ಆನಂದಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಗಲಭೆಯ ಸಮಯದಲ್ಲಿ ಹಿಂಸಾಚಾರದಿಂದ ತಪ್ಪಿಸಿಕೊಳ್ಳುತ್ತಿದ್ದಾಗ ಬಿಲ್ಕಿಸ್ ಬಾನು ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮೂರು ವರ್ಷದ ಮಗು ಮತ್ತು ಆಕೆಯ ಕುಟುಂಬದ 7 ಜನರನ್ನು ದಹಿಸಿದರು. ಇಂತಹ ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆಗೆ ಒಳಪಡಿಸಿತ್ತು. ಆದರೆ ಈ ನೀಚರನ್ನು ಅಮೃತ ಸ್ವಾತಂತ್ರ್ಯದ ಹೆಸರಿನಲ್ಲಿ ಬಿಡುಗಡೆ ಮಾಡಿರುವುದು ಖಂಡನೀಯ. ಕೂಡಲೇ ಈ ಪಾತಕಿಗಳನ್ನು ಜೈಲಿಗಟ್ಟಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಮುಖಂಡರಾದ ಬಂಗವಾದಿ ನಾರಾಯಣಪ್ಪ, ಸತೀಶ್ ಇದ್ದರು.