ಮೊಳಗಿದ ಗೋವಿಂದ ನಾಮ ಸ್ಮರಣೆ

1000502195
ಆಲೂರು ತಾಲೂಕಿನ ಅಡಿಬೈಲು ಬೆಟ್ಟದ ಮೇಲಿರುವ ರಂಗನಾಥಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
Published on

ಆಲೂರು: ತಾಲೂಕಿನಲ್ಲಿ ಶುಕ್ರವಾರ ವೈಕುಂಠ ಏಕಾದಶಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಗಂಜಿಗೆರೆ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ, ಅಡಿಬೈಲು ರಂಗನ ಬೆಟ್ಟದ ಲಕ್ಷ್ಮೀ ರಂಗನಾಥ ಸ್ವಾಮಿ, ಕುಂದೂರಿನ ಲಕ್ಷ್ಮೀನಾರಾಯಣ ಸ್ವಾಮಿ, ಗಂಗರದ ಲಕ್ಷ್ಮೀನಾರಾಯಣ ಸ್ವಾಮಿ, ಕರಿಗೌಡನಹಳ್ಳಿಯ ಲಕ್ಷ್ಮೀ ಶ್ರೀನಿವಾಸ ಸ್ವಾಮಿ, ಹಳೇಪಾಳ್ಯದ ಲಕ್ಷ್ಮೀ ಜನಾರ್ದನ ಸ್ವಾಮಿ, ಬೆಟ್ಟದಳ್ಳಿಯ ಗುಹೇಗುಡ್ಡದ ಉದ್ದಾರ ರಂಗನಾಥಸ್ವಾಮಿ, ಮರಸು ತಿರುಮಲ ರಂಗನಾಥ ಸ್ವಾಮಿ, ಹಳೇ ಆಲೂರು ತಿರುಮಲ ರಂಗನಾಥ ಸ್ವಾಮಿ ದೇವಾಲಯಗಳಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ಜರುಗಿದವು.

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಭಕ್ತರು ಮುಂಜಾನೆಯಿಂದಲೇ ದೇವಾಲಯಕ್ಕೆ ಭೇಟಿ ನೀಡಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಏಕಾದಶಿ ಪ್ರಯುಕ್ತ ಭಕ್ತರು ಉಪವಾಸ ವ್ರತವನ್ನು ಆಚರಿಸಿದರು.

ದೇವಾಲಯದ ಆವರಣದಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರಕ್ಕೆ ಅರ್ಚಕರ ತಂಡ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ಗೋವಿಂದ ನಾಮಸ್ಮರಣೆ ಮಾಡುತ್ತ ವೈಕುಂಠ ದ್ವಾರ ಪ್ರವೇಶ ಮಾಡಿದರು. ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net