

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಉಪಪೊಲೀಸ್ ಠಾಣೆ ಎದುರಿನ ರಾಷ್ಟ್ರೀಯ ಹೆದ್ದಾರಿ ತಡೆಗೋಡೆಗೆ ಬೆಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮತಪಟ್ಟಿರುವ ಟನೆ ಮಂಗಳವಾರ ಸಂಭವಿಸಿದೆ. ಚನ್ನಮ್ಮನ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದ ಸಂಗಮೇಶ ಚವಲಗಿ(32) ಮೃತ ಬೆಕ್ ಸವಾರ. ಹಿಂಬದಿ ಸವಾರ ಶಂಕರಗೌಡ ಪಾಟೀಲ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ಧಾರವಾಡ ಕಡೆ ತಮ್ಮೂರಿಗೆ ತೆರಳುತ್ತಿದ್ದಾಗ ಎಂ.ಕೆ.ಹುಬ್ಬಳ್ಳಿ ಬಳಿ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ತಡೆಗೋಡೆಗೆ ಬೆಕ್ ಡಿಕ್ಕಿಯಾಗಿ ಸವಾರನ ತಲೆಗೆ ಬಲವಾಗಿ ಪೆಟ್ಟುಬಿದ್ದಿದೆ. ಟನಾ ಸ್ಥಳಕ್ಕೆ ಸಿಪಿಐ ಶಿವಾನಂದ ಗುಡಗನಟ್ಟಿ, ಅಪರಾಧ ವಿಭಾಗದ ಪಿಎಸ್ಐ ಪ್ರವಿಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.