ಸಮಾಜಕ್ಕೆ ಪೌರ ಕಾರ್ಮಿಕರ ಪಾತ್ರ ಅಪಾರ

29M.D.R.3
ಮದ್ದೂರು ಪಟ್ಟಣದ ಪುರಸಭೆಯಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕ ದಿನಾಚರಣೆಯಲ್ಲಿ ಪೌರ ಕಾರ್ಮಿಕರನ್ನು ಶಾಸಕ ಕೆ.ಎಂ.ಉದಯ್ ಅಭಿನಂದಿಸಿದರು. ಪ್ರಿಯಾಂಕಾ ಅಪ್ಪುಗೌಡ, ಕೋಕಿಲಾ ಅರುಣ್, ಪ್ರಮೀಳಾ, ಬಸವರಾಜು, ಸರ್ವಮಂಗಳಾ ಶಿವನಂಜಯ್ಯ, ಸಿದ್ದರಾಜು, ಮನೋಜ್, ಮಹೇಶ್, ವನಿತಾ, ಸತೀಶ್ ಇದ್ದರು.
Published on

ಮದ್ದೂರು: ಸಮಾಜದಲ್ಲಿ ಪೌರ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಇವರನ್ನು ಪ್ರತಿಯೊಬ್ಬರೂ ಪ್ರೀತಿಯಿಂದ ಕಾಣಬೇಕು ಎಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.

ಪಟ್ಟಣದ ಪುರಸಭೆಯ ಸಿಡಿಎಸ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಯಲ್ಲಿ ಪೌರ ಕಾರ್ಮಿಕರನ್ನು ಅಭಿನಂದಿಸಿ ಮಾತನಾಡಿದರು. ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ನಿರಂತರವಾಗಿ ಪಟ್ಟಣದ ಸ್ವಚ್ಛ ಮಾಡುವ ಕೆಲಸವನ್ನು ಪ್ರಾಮಾಣಿವಕಾಗಿ ಮಾಡುತ್ತಿದ್ದಾರೆ. ಇವರ ಸ್ವಚ್ಛತಾ ಕಾರ್ಯವೇ ನಾವುಗಳು ಆರೋಗ್ಯವಾಗಿರಲು ಕಾರಣವಾಗಿದೆ ಎಂಬುವುದನ್ನು ಪ್ರತಿಯೊಬ್ಬರೂ ಮನಗಾಣಬೇಕು. ಕೋವಿಡ್ ಸಂದರ್ಭದಲ್ಲಿ ಪೌರ ಕಾರ್ಮಿಕರು ತಮ್ಮ ಪ್ರಾಣ ಲೆಕ್ಕಿಸದೆ ತಮ್ಮ ಕಾಯಕ ಮಾಡಿದ್ದಾರೆ. ಇದಕ್ಕೆ ಎಂದಿಗೂ ಬೆಲೆ ಕಟ್ಟಲು ಸಾಧ್ಯವಾಗುವುದಿಲ್ಲ. ಇದನ್ನು ನಾವು ಸ್ಮರಿಸಬೇಕು ಮತ್ತು ಅಭಿನಂದಿಸಬೇಕು ಎಂದು ತಿಳಿಸಿದರು.

ಪೌರಕಾರ್ಮಿಕರಿಗೆ ಮೂಲ ಸೌಕರ್ಯ ಹಾಗೂ ವಿಶೇಷ ಯೋಜನೆಗಳನ್ನು ಕಲ್ಪಿಸುವ ಸಂಬಂಧ ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತೇನೆ. ಈ ಸಂಬಂಧ ಪೌರಕಾರ್ಮಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಶಾಸಕರು ಭರವಸೆ ನೀಡಿದರು.

ಪಟ್ಟಣದ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ನಿಗದಿತ ಸಮಯಕ್ಕೆ ವೇತನ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net