ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರ

sid (2)
Published on

ಆರ್ಡಿ: ದಾನಿಗಳು, ಹಳೇ ವಿದ್ಯಾರ್ಥಿಗಳು ನೀಡುವ ಕೊಡುಗೆಗಳು ಶಾಲೆ, ವಿದ್ಯಾರ್ಥಿಗಳ ಬೆಳವಣಿಗೆಗೆ ಪ್ರಮುಖ ಕಾರಣವಾಗುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರವೂ ಮಹತ್ವದ್ದು ಎಂದು ಮುಖ್ಯಶಿಕ್ಷಕ ನಾರಾಯಣ ನಾಯ್ಕ ಹೇಳಿದರು.

ಕೊಂಜಾಡಿ ಕಲ್ಮರ್ಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಹಳೇ ವಿದ್ಯಾರ್ಥಿ ಸಂತೋಷಕುವಾರ್ ಶೆಟ್ಟಿ ತೂಂಬಿನಕೆರೆ ಅವರು ಕೊಡುಗೆ ನೀಡಿದ ಕ್ರೀಡಾ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಳೇ ವಿದ್ಯಾರ್ಥಿ ಸಂದ ಅಧ್ಯಕ್ಷ ಪ್ರಸಾದ್ ತೊನ್ನಾಸೆ ಮತ್ತು ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷ ಗಿರೀಶ್ ನಾಯ್ಕ ಕಲ್ಮರ್ಗಿ, ಉಪಾಧ್ಯಕ್ಷೆ ಗೀತಾ, ಸದಸ್ಯರು, ಪತ್ರಕರ್ತ ಕೆ.ಸಂಜೀವ ಆರ್ಡಿ, ಶಿಕ್ಷಕಿ ಶಶಿಕಲಾ ಶೆಟ್ಟಿ, ಪಾಲಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net