ಮಕ್ಕಳ ಬೌದ್ಧಿಕ ವಿಕಾಸದಲ್ಲಿ ಶಿಕ್ಷಕರ ಪಾತ್ರ ದೊಡ್ಡದು

ಮಕ್ಕಳ ಬೌದ್ಧಿಕ ವಿಕಾಸದಲ್ಲಿ ಶಿಕ್ಷಕರ ಪಾತ್ರ ದೊಡ್ಡದು
Published on

ಬನ್ನೂರು: ಮಕ್ಕಳ ಬೌದ್ಧಿಕ ವಿಕಾಸದಲ್ಲಿ ಶಿಕ್ಷಕ ಹಾಗೂ ಪಾಲಕರ ಪಾತ್ರ ಮುಖ್ಯವಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷೆ ಮಂಗಳಾ ಹೇಳಿದರು.

ಪಟ್ಟಣ ಸಮೀಪದ ಬೀಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಭಾಗವಹಿಸಿ ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಕಲಿಕೆಯ ಗುಣಮಟ್ಟದಲ್ಲೂ ಬೆಳವಣಿಗೆಯಾಗಬೇಕು. ವಾರ್ಷಿಕೋತ್ಸವ ಮಕ್ಕಳಿಗೆ ವೇದಿಕೆ ಕಲ್ಪಿಸುವುದರ ಜತೆಗೆ ಆತ್ಮಸ್ಥರ್ಯ ಮೂಡಿಸುತ್ತದೆ ಎಂದರು.

ಮುಖ್ಯ ಶಿಕ್ಷಕಿ ಎಚ್.ಬಿ.ಮಮತಾ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕಲಿಗೆ ಪೂರಕ ವಾತಾವರಣ ನಿರ್ಮಿಸಲಾಗಿದ್ದು, ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮನಸ್ಸುಮಾಡಬೇಕೆಂದರು. ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಶಿಕ್ಷಕ ವಿಷಕಂಠೇಗೌಡ, ಪ್ರಸನ್ನ, ಚಂದ್ರಮ್ಮ, ಬೀಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಸದಸ್ಯೆ ಯಶೋದಮ್ಮ, ನಂದೀಶ್, ಕೃಷ್ಣೇಗೌಡ, ರಾಜೇಶ್, ಹರಿಪ್ರಸಾದ್, ನಾಗಾರ್ಜುನ, ಮಂಜುಳಾ, ಲಕ್ಷ್ಮೀ, ಶ್ರೀಕಾಂತ, ಮಣಿಕಂಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net