ಸರ್ಕಾರಿ ಶಾಲೆ ಬೆಳವಣೆಗೆಯಲ್ಲಿ ಸಂಸಂಸ್ಥೆ ಪಾತ್ರ ಅಮೂಲ್ಯ

sid
Published on

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು, ಸಂ ಸಂಸ್ಥೆಗಳು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ದಾನಿಗಳು, ಸಂ ಸಂಸ್ಥೆಗಳು ಕೊಡುಗೆಗಳನ್ನು ನೀಡಿದಾಗ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಬೆಳೆಯಲು ಸಾಧ್ಯ ಎಂದು ಅಂಪಾರು ವ್ಯವಸಾಯಿಕ ಸೇವಾ ಸಹಕಾರಿ ಸಂ ಉಪಾಧ್ಯಕ್ಷ ಹಾಗೂ ಉದ್ಯಮಿ ನವೀನಕುವಾರ್ ಶೆಟ್ಟಿ ಶಾನ್ಕಟ್ಟು ಹೇಳಿದರು.

ಕೊಡ್ಲಾಡಿ ವಾರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಟಕದ ವತಿಯಿಂದ ಇತ್ತೀಚೆಗೆ ನಡೆದ ಕೊಡೆ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಅಧ್ಯಕ್ಷತೆ ವಹಿಸಿ ವಾತನಾಡಿ, ಕರವೇಯಿಂದ ನೀಡಲಾದ ಕೊಡುಗೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಬೇಕು ಎಂದರು.

ಕರವೇ ಮಹಿಳಾ ಟಕ ಜಿಲ್ಲಾಧ್ಯಕ್ಷೆ ಜ್ಯೋತಿ ಶೇರಿಗಾರ್, ಕುಂದಾಪುರ ತಾಲೂಕು ನೂತನ ಟಕ ಅಧ್ಯಕ್ಷ ಉದಯಕುವಾರ ಶೆಟ್ಟಿ ಮೂಡುಬಗೆ, ಶಿಕ್ಷಣ ಸಂಯೋಜಕ ರಾವೇಂದ್ರ, ಹಳೇ ವಿದ್ಯಾರ್ಥಿ ಸಂ ಅಧ್ಯಕ್ಷ ಅಶ್ವಿತ್ ಶೆಟ್ಟಿ ಕೊಡ್ಲಾಡಿ, ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಭೋವಿ, ಮುಖ್ಯ ಶಿಕ್ಷಕ ಲಕ್ಷ್ಮಣ, ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಲಕ್ಷ್ಮಣ ಸ್ವಾಗತಿಸಿದರು. ಮಹಿಳಾ ಟಕದ ಮೋಹಿನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net