ಉದ್ಯೋಗ ಕಾರ್ಯವೈಖರಿಗಳಲ್ಲಿ ಕಾರ್ಮಿಕರ ಪಾತ್ರ ಅಪಾರ

4, srinivaspur photo-1
Published on

ಶ್ರೀನಿವಾಸಪುರ: ಉದ್ಯೋಗ ಕಾರ್ಯವೈಖರಿಗಳಲ್ಲಿ ಕಾರ್ಮಿಕರ ಪಾತ್ರ ದೊಡ್ಡದಿದ್ದು, ಈ ನಿಟ್ಟಿನಲ್ಲಿ ಕಾರ್ಮಿಕರಿಗೆ ಸರ್ಕಾರ ವಿವಿಧ ಸವಲತ್ತುಗಳನ್ನು ನೀಡುತ್ತಿದ್ದು, ಕಾರ್ಮಿಕರು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

ಪಟ್ಟಣದ ಪುರಸಭೆಯ ವಾಣಿಜ್ಯ ಮಳಿಗೆಗಳ ಆವರಣದಲ್ಲಿ ಇತ್ತೀಚೆಗೆ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿಮಾರ್ಣ ಕಾರ್ಮಿಕರ ಕಲ್ಯಾಣ ಮಂಡಲಿಯಿಂದ ಹಮ್ಮಿಕೊಂಡಿದ್ದ ಕಿಟ್​ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಟ್ಟಡ ನಿಮಾರ್ಣದಲ್ಲಿ ಮೇಸ್ತ್ರಿಗಳು, ಎಲೆಕ್ಟ್ರಿಷಿಯನ್​ಗಳು, ವೆಲ್ಡರ್​ಗಳು ಸೇರಿ ಇತರ ಕಾರ್ಮಿಕರಿಗೆ ಕೆಲಸ ಮಾಡುವುದಕ್ಕೆ ಅಗತ್ಯವಿರುವ ಎಲ್ಲ ಕೌಶಲ ಆಧಾರಿತ ಟೂಲ್​ಕಿಟ್​ಗಳನ್ನ ಕಾರ್ಮಿಕ ಇಲಾಖೆ ಮೂಲಕ ನೀಡುತ್ತಿದೆ. ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಅನೇಕ ಸೌಲಭ್ಯ ನೀಡಲಾಗುತ್ತಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸರ್ಕಾರದ ಸೌಲಭ್ಯಗಳ ಬಗ್ಗೆ ಕಾರ್ಮಿಕರಿಗೆ ನೀಡಿದಲ್ಲಿ ಸೌಲಭ್ಯಗಳು ಅರ್ಹರಿಗೆ ದೊರೆಯಲು ಸಾಧ್ಯ ಎಂದರು.

ಕಾರ್ಮಿಕ ಇಲಾಖೆ ನಿರೀಕ್ಷಕಿ ಆಶಾರಾಣಿ ಮಾತನಾಡಿ, ಇಲಾಖೆಯಿಂದ 1,966 ಕಿಟ್​ಗಳು ಬಂದಿದೆ. 800 ಕಿಟ್​ಗಳನ್ನು ಹಂಚಿಲಾಗಿದೆ. ಉಳಿದಂತೆ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net