ಸಮಾಜದಲ್ಲಿ ಕಾರ್ಮಿಕರ ಪಾತ್ರ ಬಹಳಷ್ಟಿದೆ

16 ckm 1
ಚಿಕ್ಕಮಗಳೂರಿನ ಕಾರ್ಮಿಕ ಭವನದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಬುಧವಾರ ವೆಲ್ಡರ್, ಮ್ಯಾಸಸ್ ಹಾಗೂ ಎಲೆಕ್ಟಿçÃಷಿಯನ್ ಕಟ್ಟಡ ಕಾರ್ಮಿಕರಿಗೆ ಉಚಿತ ಸಲಕರಣೆಗಳ ಕಿಟ್ಟನ್ನು ಶಾಸಕ ಎಚ್.ಡಿ.ತಮ್ಮಯ್ಯ ವಿತರಿಸಿದರು. ರವಿಕುಮಾರ್, ಎಂ.ಸಿ.ಶಿವಾನAದ ಸ್ವಾಮಿ, ಪ್ರಭಾಕರ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಜನಸಾಮಾನ್ಯರ ಬದುಕನ್ನು ಹಸನುಗೊಳಿಸುವಲ್ಲಿ ಕಟ್ಟಡ ಕಾರ್ಮಿಕರ ಪಾತ್ರ ಬಹಳಷ್ಟಿದೆ. ಆ ನಿಟ್ಟಿನಲ್ಲಿ ಕಾರ್ಮಿಕರ ಭದ್ರತೆ ದೃಷ್ಟಿಯಿಂದ ರಾಜ್ಯಸರ್ಕಾರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬೆನ್ನುಲುಬಾಗಿ ನಿಂತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ನಗರದ ಕಾರ್ಮಿಕ ಭವನದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಬುಧವಾರ ವೆಲ್ಡರ್, ಮ್ಯಾಸಸ್ ಹಾಗೂ ಎಲೆಕ್ಟಿçÃಷಿಯನ್ ಕಟ್ಟಡ ಕಾರ್ಮಿಕರಿಗೆ ಉಚಿತ ಸಲಕರಣೆಗಳ ಕಿಟ್ ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ಶ್ರಮಿಕರಾಗಿ ದುಡಿಯುವ ಕಾರ್ಮಿಕ ವರ್ಗಕ್ಕೆ ಕೊಂಚವು ಸಮಸ್ಯೆಯಾಗದಂತೆ ಪಿಂಚಣಿ, ವೈದ್ಯಕೀಯ ಸೌಲಭ್ಯ, ಸಹಾಯಧನ, ಕುಟುಂಬದ ಮಕ್ಕಳಿಗೆ ಶಿಕ್ಷಣ ಹಾಗೂ ಆರೋಗ್ಯ ತಪಾಸಣೆಯಂಥ ಶಿಬಿರ ಆಯೋಜಿಸಿ ಕಾರ್ಮಿಕರ ಕುಟುಂಬವನ್ನು ನೆಮ್ಮದಿಯಿಂದಿರಿಸಲು ಸರ್ಕಾರ ಕಾರ್ಯಪ್ರವೃತ್ತ ವಾಗಿದೆ ಎಂದರು.
ಪ್ರಸ್ತುತ ರಾಜ್ಯಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿದೆ. ಉಚಿತ ಗ್ಯಾರಂಟಿ ಭಾಗ್ಯ ಗಳ ಜೊತೆಗೆ ಪ್ರತಿ ತಾಲ್ಲೂಕಿಗೆ ಕೋಟ್ಯಂತರ ರೂ. ಅನುದಾನ ಹಾಗೂ ಉಚಿತ ಸಲಕರಣೆಗಳನ್ನು ವಿತರಿಸಿ ಕಾರ್ಮಿಕರನ್ನು ಆರ್ಥಿಕವಾಗಿ ಸದೃಢಗೊಳಿಸುವಲ್ಲಿ ಮುಂದಾಗುತ್ತಿದೆ. ಕಾರ್ಮಿಕರ ಮದುವೆ ಅಥವಾ ಇನ್ನಿತರೆ ಸವಲತ್ತಿಗೆ ಸ್ಪಂದಿಸುತ್ತಿದೆ ಎಂದು ತಿಳಿಸಿದರು.
ಭವಿಷ್ಯದಲ್ಲಿ ಕಾರ್ಮಿಕರ ಮಕ್ಕಳು ಕಾರ್ಮಿಕರಾಗಬಾರದೆಂಬ ದೃಷ್ಟಿಯಿಂದ ಗುಣಮಟ್ಟದ ವಿದ್ಯಾಭ್ಯಾಸವನ್ನು ಸರ್ಕಾರ ಒದಗಿಸುತ್ತಿದೆ. ಆ ನಿಟ್ಟಿನಲ್ಲಿ ಪಾಲಕರು ಇಲಾಖೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಕ್ಕಳಿಗೆ ವಿದ್ಯಾರ್ಜನೆಗೆ ಮುಂದಾದರೆ ಮುಂದೊAದು ದಿನ ಕಾರ್ಮಿಕ ಇಲಾಖೆಗಳಲ್ಲಿ ಅಧಿಕಾರಿಗಳಾಗಿ ನೇಮಕವಾಗಬಹುದು ಎಂದು ಹೇಳಿದರು.
ಶೋಷಿತರ ಪರ ಧ್ವನಿಗೂಡಿಸುವ ಮಹಾಪುರುಷರಂತೆ ಇಂದಿನ ಕಾಲಘಟ್ಟದಲ್ಲಿ ಮುಖ್ಯಮಂತ್ರಿ ಸಿದ್ದ ರಾಮಯ್ಯನವರು ಬಡವರು, ಶೋಷಿತರು ಹಾಗೂ ದೀನದಲಿತರ ಶ್ರೇಯೋಭಿವೃಧ್ದಿಗೆ ಶ್ರಮಿಸುವ ಮೂಲಕ ನಾಡಿನ ಏಕೈಕ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುತ್ತಿದ್ದಾರೆ ಎಂದರು.
ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ ಮಾತನಾಡಿ, ಕಾರ್ಮಿಕರು ಬದುಕಿನಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಏಳಿಗೆ ಹೊಂದುವ ದೃಷ್ಟಿಯಿಂದ ಅನೇಕ ಸವಲತ್ತು ಒದಗಿಸುತ್ತಿದೆ. ಆದರೆ ಕೆಲವು ಮಂದಿ ಕಾಟಾಚಾರಕ್ಕೆ ಮಾತನಾಡುವುದು ಸರಿಯಲ್ಲ. ಇಲಾಖೆಯಿಂದ ದೊರೆಯಂಥ ಸೌಲಭ್ಯ ಪಡೆದುಕೊಂಡಿದಕ್ಕೆ ಕೃತಜ್ಞತೆ ಸಲ್ಲಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿನ ಕಾರ್ಮಿಕರಿಗೆ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಲಭ್ಯವಾಗುತ್ತಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಉಚಿತ ಅಕ್ಕಿ ವಿತರಿಸಲಾಗುತ್ತಿದ್ದು, ಸಣ್ಣ ಪುಟ್ಟ ಬದಲಾವಣೆ ಹೊರತಾಗಿ ಸಂಪೂರ್ಣ ಗ್ಯಾರಂಟಿ ಮುಂದಿನ ಅವಧಿವರೆಗೂ ವಿಸ್ತರಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ರವಿಕುಮಾರ್, ದೇಶದಲ್ಲಿ ರೈತ ಬಾಂಧವರು ಹೊರತಾಗಿ ಅತಿಹೆಚ್ಚು ಜನಸಂಖ್ಯೆಯಲ್ಲಿ ಕಾರ್ಮಿಕ ವರ್ಗ ಮುಂಚೂಣಿಯಲ್ಲಿದೆ. ಹೀಗಾಗಿ ಕೇಂದ್ರ ಸರ್ಕಾರ ಶ್ರಮಿಕ ವರ್ಗಕ್ಕೆ ಅನುಕೂಲ ಹಾಗೂ ಜೀವನ ಭದ್ರತೆ ಒದಗಿಸಲು ಕಾರ್ಮಿಕ ಇಲಾಖೆ ಸ್ಥಾಪಿಸಿ ಸಹಕರಿಸುತ್ತಿದೆ ಎಂದರು.
ಇದೇ ವೇಳೆ ಕಾರ್ಮಿಕ ಇಲಾಖೆಯಲ್ಲಿ ನೊಂದಣಿಯಾಗಿದ್ದ ಸುಮಾರು ೨೦೦ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಉಚಿತ ಸಲಕರಣೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಚ್.ಕೆ.ಪ್ರಭಾಕರ್, ಪ್ರವೀಣ್, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಪ್ರವೀಣ್‌ಕುಮಾರ್, ರಾಘವೇಂದ್ರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net