ದೇಶ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯ

2sdp2
Published on

ಸಿದ್ದಾಪುರ: ವಿದ್ಯಾರ್ಥಿಗಳು ಕಲಿಕೆ ಸಂದರ್ಭದಲ್ಲಿ ಆಸಕ್ತಿಯಿಂದ ಉತ್ತಮ ಶಿಕ್ಷಣ ಪಡೆದು ರಾಜ್ಯ, ದೇಶಕ್ಕೆ ಆಸ್ತಿಯಾಗಬೇಕು. ದೇಶ ನಿರ್ಮಾಣದಲ್ಲಿ ಯುವಜನತೆ ಪಾತ್ರ ಮುಖ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ತಾಲೂಕಿನ ಬೇಡ್ಕಣಿ ಸಮೀಪದ ಸರ್ಕಾರಿ ಪದವಿ ಕಾಲೇಜಿನ 2022-23ನೇ ಸಾಲಿನ ವಿವಿಧ ಶೈಕ್ಷಣಿಕ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಅವರು ಶನಿವಾರ ಮಾತನಾಡಿದರು.
ವಿದ್ಯಾರ್ಥಿಗಳು ಹಸಿರು ಪರಿಸರ ಉಳಿಸಲು ಪಣತೊಡಬೇಕು. ಪರಿಸರ, ಅರಣ್ಯ ಇದ್ದರೆ ಮಾತ್ರ ಮನುಕುಲವೂ ಉಳಿಯಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸರ್ಕಾರ ಕಲ್ಪಿಸಿದ ಶೈಕ್ಷಣಿಕ ವ್ಯವಸ್ಥೆಯ ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು. ಸಿದ್ದಾಪುರ ಕಾಲೇಜು ಇನ್ನೂವರೆಗೂ ನ್ಯಾಕ್ ಮಾನ್ಯತೆ ಪಡೆದಿಲ್ಲ. ಈ ಬಗ್ಗೆ ಕಾಲೇಜು ಪ್ರಮುಖರು ಲಕ್ಷ್ಯ ವಹಿಸಿ, ಕಾಲೇಜು ಅಭಿವೃದ್ದಿ, ಶೈಕ್ಷಣಿಕ ಸುಧಾರಣೆ ದೃಷ್ಟಿಯಿಂದ, ಮಕ್ಕಳ ಹಿತದೃಷ್ಟಿಯಿಂದ ನ್ಯಾಕ್ ಮಾನ್ಯತೆ ಪಡೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net