ರೌಡಿಶೀಟರ್ ಮದನ್ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು

police 2
ಸಾಂದರ್ಭಿಕ ಚಿತ್ರ
Published on

ಹುಬ್ಬಳ್ಳಿ: ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪಿಯನ್ನು 6 ತಿಂಗಳು ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

ಹಳೇಹುಬ್ಬಳ್ಳಿಯ ಶಿವಶಂಕರ ಕಾಲನಿಯ ಮದನ ಅಲಿಯಾಸ್ ಮಧ್ಯಾ ಚಂದಪ್ಪ ಬುಗಡಿ (33 )ಎಂಬಾತನನ್ನು ಸೆ.11ರಿಂದ 6 ತಿಂಗಳ ಅವಧಿ ವರೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಈತನ ಮೇಲೆ ಕೊಲೆ, ಕೊಲೆ ಯತ್ನ, ಸುಲಿಗೆ, ಹಲ್ಲೆ, ಎಸ್ಸಿ,ಎಸ್ಟಿ ದೌರ್ಜನ್ಯ ಸೇರಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ.

ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿ ಕೂಡ ತೆರೆಯಲಾಗಿದೆ. ಪದೇಪದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಪ್ರವೃತ್ತಿ ಹೊಂದಿರುವ ಈತನಿಗೆ 6 ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net