

ಮದ್ದೂರು: ಕೋಟ್ಯಂತರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬದುಕು ರೂಪಿಸಿ ನಡೆದಾಡುವ ದೇವರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಪುರಸಭಾ ಮಾಜಿ ಅಧ್ಯಕ್ಷ ಶಿವಾನಂದ ತಿಳಿಸಿದರು.
ಡಾ.ಶಿವಕುಮಾರ ಸ್ವಾಮೀಜಿ ಅವರ 118ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ರಾಮಮಂದಿರ ಪಾರ್ಕ್ ಸಮೀಪ ಡಾ.ಶಿವಕುಮಾರ ಸ್ವಾಮೀಜಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯೆ, ದಾಸೋಹ ಹಾಗೂ ವಸತಿ ನೀಡಿ ನಡೆದಾಡುವ ದೇವರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿ ಅವರು ತ್ರಿವಿಧ ದಾಸೋಹಿ ಎಂಬ ಬಿರುದು ಪಡೆದು ಭಕ್ತರ ಮನದಲ್ಲಿ ದೇವರಾಗಿದ್ದಾರೆ ಎಂದು ಬಣ್ಣಿಸಿದರು.
ಮುಖಂಡರಾದ ಶಿವಾನಂದ, ಮೇಘನಾ, ಬಸವರಾಜು, ಮಂಜುನಾಥ್, ಕೆ.ಜಿ.ಗುರುಮಲ್ಲೇಶ್, ಲಿಂಗರಾಜು, ರವಿಶಂಕರ್, ಕೃಷ್ಣ, ತಮ್ಮಣ್ಣ ಇದ್ದರು.