ಉತ್ತಮ ಸಮಾಜ ನಿರ್ಮಾಣಕ್ಕೆ ಸರ್ವಜ್ಞರ ವಚನ ಅವಶ್ಯಕ

h20-Jaynti
Published on

ಹುಬ್ಬಳ್ಳಿ: ವಚನಕಾರರಲ್ಲಿಯೇ ಸರ್ವಜ್ಞ ಅವರು ವಿಶೇಷ ಸ್ಥಾನ ಪಡೆದಿದ್ದಾರೆ. ಅವರ ವಚನಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಅವಶ್ಯಕವಾಗಿವೆ ಎಂದು ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.
ನಗರದ ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿಯ ಸಭಾ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಂತಕವಿ ಶ್ರೀ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ನಂತರ ಅವರು ಮಾತನಾಡಿದರು.
ವಚನಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಿದ್ದಾರೆ. ಇವರು ಸತ್ಯಗಳನ್ನು ನೇರವಾಗಿ ತಮ್ಮ ವಚನಗಳಲ್ಲಿ ಬಿಂಬಿಸಿದ್ದಾರೆ. ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಸರ್ವಜ್ಞರ ವಚನಗಳು ಮಾದರಿಯಾಗಿವೆ. ಅವರ ವಚನಗಳ ಸಾರವನ್ನು ಅರಿತು ನಾವೆಲ್ಲರೂ ಮುನ್ನಡೆಯಬೇಕು ಎಂದರು. ಎಂ.ಪಿ. ಕುಂಬಾರ ಮಾತನಾಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಸಮಾಜದ ಮುಖಂಡರಾದ ಎಂ.ಎಂ. ಗೌಡರ, ಡಿ.ಆರ್. ಕುಂಬಾರ, ವಿವೇಕಾನಂದ ಹಾದಿಮನಿ, ಅಶೋಕ ಹೊಸಮನಿ, ವಿ.ಆರ್. ಕಿರೇಸೂರ ಇತರರು ಉಪಸ್ಥಿತರಿದ್ದರು. ಮೃತ್ಯುಂಜಯ ಜಡಿಮಠ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net